ನವದೆಹಲಿ : ಕೊರೋನಾ ಎರಡನೇ ಅಲೆಯ ತೀವ್ರತೆಗೆ ದೇಶ ತತ್ತರಿಸಿದೆ. ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 44,111 ಜನರಿಗೆ ಕೊರೋನಾ ಸೋಂಕು ತಗುಲಿದೆ. 738 ಮಂದಿ ಸೋಂಕಿಗೆ ಬಲಿಯಾಗಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ಶನಿವಾರದ ವರೆಗೆ ಅಂಕಿ-ಅಂಶಗಳನ್ನು ಗಮನಿಸಿದಾಗ ಒಟ್ಟು ಸೋಂಕಿತರ ಸಂಖ್ಯೆ 3,05,02,362 ಕ್ಕೆ ತಲುಪಿದೆ. ಅದರಂತೆ ಸಾವಿನ ಸಂಖ್ಯೆ 4,01,050 ಗೆ ಏರಿಕೆಯಾಗಿದೆ. ಆದರೆ ಸಕ್ರಿಯ ಸೋಂಕಿತರ ಸಂಖ್ಯೆ 4,95,533 ಕ್ಕೆ ಇಳಿದಿದೆ. 97 ದಿನಗಳ ಬಳಿಕ ಇದೇ ಮೊದಲ ಬಾರಿಗೆ ಅತೀ ಕಡಿಮೆ ದಾಖಲಾದ ಸೋಂಕಿತರ ಪ್ರಮಾಣ ಇದಾಗಿದೆ.
ಅದರಂತೆಯೇ ಕಳೆದ 24 ಗಂಟೆಗಳಲ್ಲಿ 57,477 ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ. ಆ ಮೂಲಕ ಈ ವರೆಗೆ ಚೇತರಿಸಿಕೊಂಡವರ ಸಂಖ್ಯೆ 2,96,05,779 ಕ್ಕೆ ಏರಿಕೆಯಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.