ನವದೆಹಲಿ: ಜಗತ್ತಿನ ಸುಮಾರು 100 ರಾಷ್ಟ್ರಗಳಲ್ಲಿ ಡೆಲ್ಟಾ ರೂಪಾಂತರ ಸೋಂಕು ಪತ್ತೆಯಾಗಿದ್ದು, ಇದು ಆತಂಕಕಾರಿ ಬೆಳವಣಿಗೆಯೇ ಸರಿ ಎಂದು ವಿಶ್ವ ಆರೋಗ್ಯ ಸಂಸ್ಥೆಯ ಮುಖ್ಯಸ್ಥ ಟೆಡ್ರೊಸ್ ಅಧಾನಮ್ ಘೆಬ್ರೆಯೆಸಸ್ ತಿಳಿಸಿದ್ದಾರೆ.
ಈ ಸೋಂಕು ಕಳೆದ ಅಕ್ಟೋಬರ್ನಲ್ಲಿ ಪತ್ತೆಯಾಗಿದ್ದು, ಪ್ರಸ್ತುತ ಅನೇಕ ದೇಶಗಳಲ್ಲಿ ಅತ್ಯಂತ ಶಕ್ತಿಶಾಲಿ ರೂಪಾಂತರಿಯಾಗಿ ಮಾರ್ಪಟ್ಟಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕ ಆರೋಗ್ಯ ಪ್ರತಿಕ್ರಿಯೆಯನ್ನು ಬಹಳಷ್ಟು ಎಚ್ಚರಿಕೆಯಿಂದ ನಿಭಾಯಿಸುವ ಅಗತ್ಯ ಇರುವುದಾಗಿ ಅವರು ಹೇಳಿದ್ದಾರೆ.
ಹಾಗೆಯೇ ಲಸಿಕಾ ಅಭಿಯಾನ ಕಡಿಮೆ ಪ್ರಮಾಣದಲ್ಲಿ ನಡೆದಿರುವ ದೇಶಗಳಲ್ಲಿ ಕೊರೋನಾ ಸೋಂಕು ಭಯಾನಕವಾಗಿದೆ. ಈ ಹಿನ್ನೆಲೆಯಲ್ಲಿ ಜಾಗತಿಕ ಆರ್ಥಿಕತೆಯ ಚೇತರಿಕೆಯಾಗಬೇಕಿದೆ. ಆರೋಗ್ಯ ಚೇತರಿಕೆ ಕಾಣಬೇಕಿದೆ. ಇದಕ್ಕೆ ಲಸಿಕೆಯೇ ಸೂಕ್ತ ಮಾರ್ಗ ಎಂದು ಅವರು ತಿಳಿಸಿದ್ದಾರೆ.
ಎಲ್ಲಾ ದೇಶಗಳ 70% ಗಳಷ್ಟು ಜನರಿಗೆ ಲಸಿಕೆ ನೀಡಲು ಅಗತ್ಯ ಕ್ರಮ ಕೈಗೊಳ್ಳುವಂತೆಯೂ ಅವರು ವಿಶ್ವದ ರಾಷ್ಟ್ರಗಳಿಗೆ ಮನವಿ ಮಾಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.