ನವದೆಹಲಿ: ಕೇಂದ್ರ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಬಿಡುಗಡೆ ಮಾಡಿರುವ ವರದಿಯಲ್ಲಿ ದೇಶದ ವೈಜ್ಞಾನಿಕ ಸಂಶೋಧನಾ ಯೋಜನೆಗಳಲ್ಲಿ ಮಹಿಳೆಯರ ಭಾಗವಹಿಸುವಿಕೆ ಹೆಚ್ಚಾಗುತ್ತಿರುವುದಾಗಿ ತಿಳಿಸಿದೆ.
ಈ ಸಂಶೋಧನೆಯನ್ನು ವೈಜ್ಞಾನಿಕ ಹಾಗು ಉನ್ನತ ಶಿಕ್ಷಣ ಸಂಸ್ಥೆಗಳ ಬಾಹ್ಯ ಬೆಂಬಲದೊಂದಿಗೆ ನಡೆಸಲಾಗಿದೆ. ಈ ಅಧ್ಯಯನ ವರದಿಯಲ್ಲಿ, ಸಂಶೋಧನಾ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಮಹಿಳಾ ಪ್ರಧಾನ ಸಂಶೋಧಕರ ಪ್ರಮಾಣ ಏರಿಕೆಯಾಗುತ್ತಿದೆ ಎಂದು ತಿಳಿಸಿದೆ. 2016 – 17 ರ ಅವಧಿಯಲ್ಲಿ ಈ ಪ್ರಮಾಣ 24% ಗಳಷ್ಟು ಇತ್ತು. 2018 -19 ರ ವೇಳೆಗೆ 28% ಗಳಿಗೆ ಏರಿಕೆಯಾಗಿದೆ. ಬಾಹ್ಯ ಸಂಶೋಧನೆ ಮತ್ತು ಅಭಿವೃದ್ಧಿ ಯೋಜನೆಗಳಿಗೆ ಕೇಂದ್ರ ಸರ್ಕಾರ 2018 -19 ರ ಸಂದರ್ಭದಲ್ಲಿ 2091.04 ಕೋಟಿ ಮತ್ತು 2017 – 18 ರಲ್ಲಿ 2036.32 ಕೋಟಿ ರೂ. ಗಳನ್ನು ಕೇಂದ್ರ ಸರ್ಕಾರ ನೀಡಿತ್ತು ಎಂದು ವರದಿ ಉಲ್ಲೇಖಿಸಿದೆ.
ಸಂಶೋಧನಾ ಹಿನ್ನೆಲೆಯಲ್ಲಿ ಕೈಗೆತ್ತಿಕೊಳ್ಳಲಾದ ಪ್ರಾಜೆಕ್ಟ್ಗಳಲ್ಲೂ ಏರಿಕೆ ಕಂಡುಬಂದಿದೆ. ದೇಶದ 22 ಐಐಟಿಗಳಿಗೆ 822 ಪ್ರಾಜೆಕ್ಟ್ಗಳನ್ನು ನೀಡಲಾಗಿದ್ದರೆ, 26 ಎನ್ಐಟಿ ಗಳಿಗೆ 191 ಪ್ರಾಜೆಕ್ಟ್ಗಳನ್ನು ನೀಡಲಾಗಿದೆ ಎಂದು ಈ ವರದಿಯಲ್ಲಿ ಹೇಳಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.