ಬೆಂಗಳೂರು: ರಾಜ್ಯದ ನಿಕಟಪೂರ್ವ ಕಾರ್ಯದರ್ಶಿ ಟಿಎಂ ವಿಜಯಭಾಸ್ಕರ್ ನೇತೃತ್ವದ ಕರ್ನಾಟಕ ಆಡಳಿತ ಸುಧಾರಣಾ ಆರೋಗ ಸಿಎಂ ಬಿ ಎಸ್ ಯಡಿಯೂರಪ್ಪ ಅವರಿಗೆ ಮಧ್ಯಂತರ ವರದಿ ಸಲ್ಲಿಕೆ ಮಾಡಿದೆ.
ಕಂದಾಯ, ಆಹಾರ, ಸಾರಿಗೆ ಇಲಾಖೆಗಳಿಗೆ ಸಂಬಂಧಿಸಿದಂತೆ ಆಡಳಿತ ಸುಧಾರಣಾ ದೃಷ್ಟಿಯಿಂದ ಈ ವರದಿಯನ್ನು ಸಲ್ಲಿಕೆ ಮಾಡಲಾಗಿದೆ.
ಹೋಬಳಿ, ತಾಲೂಕು, ಜಿಲ್ಲಾ ಮತ್ತು ರಾಜ್ಯ ಮಟ್ಟದಲ್ಲಿ ಕಾರ್ಯ ನಿರ್ವಹಿಸುವ ಸಿಬ್ಬಂದಿಗಳ ಜೊತೆಗೂ ಈ ಆಯೋಗ ಹಲವು ಗುಂಪು ಚರ್ಚೆಗಳನ್ನು ನಡೆಸಿದೆ. 57 ಕೆಎಎಸ್ ಅಧಿಕಾರಿಗಳು ಮತ್ತು ಪ್ರೊಬೆಷನರಿ ಅಧಿಕಾರಿಗಳ ಗುಂಪು ಕ್ಷೇತ್ರ ಸಮೀಕ್ಷೆ ನಡೆಸಿ ಈ ವರದಿಯನ್ನು ತಯಾರಿಸಿದೆ.
ಈ ಸಂದರ್ಭದಲ್ಲಿ ಮುಖ್ಯ ಕಾರ್ಯದರ್ಶಿ ಪಿ ರವಿಕುಮಾರ್, ಮುಖ್ಯಮಂತ್ರಿಗಳ ಹೆಚ್ಚುವರಿ ಕಾರ್ಯದರ್ಶಿ ಇ ವಿ ರಮಣ ರೆಡ್ಡಿ, ಸಮಿತಿ ಸದಸ್ಯ ಎನ್ ಎಸ್ ಪ್ರಸನ್ನ ಕುಮಾರ್ ಉಪಸ್ಥಿತರಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.