ಬೆಂಗಳೂರು : ಮುುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪನವರು ರಾಜ್ಯ ಸರ್ಕಾರದಿಂದ ಇಂದು ಅನ್ಲಾಕ್ 3.0 ಮಾರ್ಗಸೂಚಿ ಕ್ರಮಗಳನ್ನು ಜಾರಿಗೊಳಿಸಿದರು.
ಇಂದು ಸಂಜೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು. ದೇವಾಲಯ, ಮಾಲ್ ಸೇರಿದಂತೆ ಹಲವು ಚಟುವಟಿಕೆಗಳಿಗೆ ಅವಕಾಶ ನೀಡಿದರು.
ಈ ಕುರಿತಂತೆ ಕೋವಿಡ್-19 ನಿಯಂತ್ರಣ ತಾಂತ್ರಿಕ ಸಲಹೆಗಳನ್ನು ಗಮನಿಸಿ ಸಚಿವ ಸಂಪುಟದ ಸಹೋದ್ಯೋಗಿಗಳು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ ದಿನಾಂಕ: 05-07-2021 ರಂದು ಬೆಳಿಗ್ಗೆ 5 ಗಂಟೆಯಿಂದ ದಿನಾಂಕ: 19-07-2021 ಬೆಳಿಗ್ಗೆ 5.00 ಗಂಟೆಯವರೆಗೆ ಮಾತ್ರ ಜಾರಿಗೆ ಬರುವಂತೆ ಈ ಕೆಳ ಕಾಣಿಸಿದ ಸಡಿಲಿಕೆಗಳು/ನಿರ್ಬಂಧಗಳು ಜಾರಿಯಲ್ಲಿರುತ್ತವೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ದೇವಸ್ಥಾನಗಳಲ್ಲಿ ಬರಿ ದರ್ಶನಕ್ಕೆ ಮಾತ್ರ ಅವಕಾಶ ನೀಡಿದ್ದಾರೆ. ಷರತ್ತುಬದ್ಧ ಅನ್ವಯ ಹೋಮ ಹವನ ಅನ್ನಸಂತರ್ಪಣೆ ಗಳಿಗೆ ಅವಕಾಶವಿಲ್ಲ,
ಸರ್ಕಾರಿ/ಖಾಸಗಿ ಕಛೇರಿಗಳು ಹಾಗೂ ಕೈಗಾರಿಕೆ ಮತ್ತು ವಾಣಿಜ್ಯ ಚಟುವಟಿಕೆಗಳು ಶೇ. 100 ರಷ್ಟು ಸಿಬ್ಬಂದಿಗಳೊಂದಿಗೆ ಕಾರ್ಯನಿರ್ವಹಿಸಲು ಅವಕಾಶ ನೀಡಲಾಗಿದೆ.
ಮಾಲ್ ಗಳನ್ನು ತೆರೆಯಲು ಅವಕಾಶ ನೀಡಲಾಗಿದೆ. ಆದರೆ ಚಿತ್ರಮಂದಿರವನ್ನ ತೆರೆಯಲು ಇನ್ನೂ ಅವಕಾಶ ನೀಡಿಲ್ಲ
ಮೆಟ್ರೋ ಸೇರಿದಂತೆ ಸಾರ್ವಜನಿಕ ಸಾರಿಗೆ ಶೇ. 100 ರಷ್ಟು ಪ್ರಮಾಣಿಕರೊಂದಿಗೆ ಸಂಚರಿಸಲು ಅವಕಾಶ, ಧಾರ್ಮಿಕ ಸ್ಥಳಗಳಲ್ಲಿ ದರ್ಶನಕ್ಕೆ ಅವಕಾಶ, ಮದುವೆ ಹಾಗೂ ಇನ್ನಿತರೆ ಕೌಟುಂಬಿಕ ಶುಭ ಸಮಾರಂಭಗಳಿಗೆ 100 ಜನರೊಂದಿಗೆ ಭಾಗವಹಿಸಲು ಅವಕಾಶ ನೀಡಲಾಗಿದೆ.
ಕೊರೋನಾ ಕರ್ಫ್ಯೂ (ನೈರ್ಟ್ ಕರ್ಫ್ಯೂ) ರಾತ್ರಿ 9.00 ರಿಂದ ಬೆಳಿಗ್ಗೆ 5.00 ಗಂಟೆಯವರೆಗೆ ಜಾರಿಯಲ್ಲಿರುತ್ತದೆ. ವಾರಾಂತ್ಯದ ಕರ್ಫ್ಯೂ ಜಾರಿಯಲ್ಲಿರುವುದಿಲ್ಲ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.