ಬೆಂಗಳೂರು: ಕರ್ನಾಟಕದಲ್ಲಿ ಆಂಗ್ಲ ಭಾಷೆಯಲ್ಲಿ ಶಿಕ್ಷಣ ಪಡೆಯುತ್ತಿರುವವರ ಸಂಖ್ಯೆ 20% ಗಳಷ್ಟು ಇದ್ದರೂ, ಮಾತೃಭಾಷೆ ಕನ್ನಡದಲ್ಲಿ ಶಿಕ್ಷಣ ಪಡೆಯುತ್ತಿರುವವರ ಸಂಖ್ಯೆ ಹೆಚ್ಚಾಗಿದೆ ಎಂದು 2019-20 ರ ಯೂನಿಫೈಡ್ ಡಿಸ್ಟ್ರಿಕ್ಟ್ ಇನ್ಫಾರ್ಮೇಶನ್ ಸಿಸ್ಟಮ್ ಫಾರ್ ಎಜುಕೇಶನ್ನ ವರದಿ ಬಹಿರಂಗ ಮಾಡಿದೆ.
53.5% ಗಳಷ್ಟು ವಿದ್ಯಾರ್ಥಿಗಳು ಮಾತೃಭಾಷೆ ಕನ್ನಡದಲ್ಲೇ ಶಿಕ್ಷಣ ಪಡೆಯುತ್ತಿದ್ದಾರೆ ಎಂಬ ಅಂಶವನ್ನು ಇದು ತಿಳಿಸಿದೆ. ದೇಶಕ್ಕೆ ಸಂಬಂಧಿಸಿದಂತೆ ರಾಜ್ಯಾವಾರು ಲೆಕ್ಕಾಚಾರದಲ್ಲಿ ಹೇಳುವುದಾದರೆ, ಆಂಧ್ರಪ್ರದೇಶ ಮತ್ತು ತೆಲಂಗಾಣಗಳಲ್ಲಿ ಆಂಗ್ಲ ಭಾಷೆಗೆ ಹೆಚ್ಚು ಒತ್ತು ನೀಡಲಾಗುತ್ತಿದೆ. 73.8% ಮಕ್ಕಳು ಆಂಗ್ಲ ಭಾಷೆಯಲ್ಲಿ ಕಲಿಯುತ್ತಿದ್ದು, 25% ಗಿಂತ ಕಡಿಮೆ ವಿದ್ಯಾರ್ಥಿಗಳು ರಾಜ್ಯಭಾಷೆಯಲ್ಲಿ ಶಿಕ್ಷಣ ಪಡೆಯುತ್ತಿದ್ದಾರೆ. ಕೇರಳದಲ್ಲಿ 35% ಗಳಷ್ಟು ಮಕ್ಕಳು ಮಲಯಾಳಂ ಭಾಷೆಯಲ್ಲಿ ಶಿಕ್ಷಣ ಪಡೆಯುತ್ತಿದ್ದಾರೆ.
ತಮಿಳಿಗಾಗಿ ಎಲ್ಲವನ್ನೂ ಸಮರ್ಪಿಸಲು ಸಿದ್ಧವಾದ ತಮಿಳುನಾಡಿನಲ್ಲಿಯೂ ತಮಿಳು ಭಾಷೆಯಲ್ಲಿ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳ ಸಂಖ್ಯೆ 42.6% ಎಂದು ಈ ವರದಿ ಉಲ್ಲೇಖಿಸಿದೆ. ಪಶ್ಚಿಮ ಬಂಗಾಳದಲ್ಲಿ ಆಂಗ್ಲ ಶಿಕ್ಷಣಕ್ಕೆ ಕಡಿಮೆ ಮಹತ್ವವಿದೆ. 89.8% ವಿದ್ಯಾರ್ಥಿಗಳು ಬಂಗಾಳಿಯಲ್ಲೇ ಶಿಕ್ಷಣ ಪಡೆಯುತ್ತಿದ್ದಾರೆ ಎಂದು ವರದಿ ಹೇಳಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.