ನವದೆಹಲಿ: ಕೊರೋನಾ ಸೋಂಕಿನ ವಿರುದ್ಧ ದೇಶದಾದ್ಯಂತ ಲಸಿಕೆ ವಿತರಿಸಲು ಆರಂಭಿಸಲಾದ ಕೋವಿನ್ ಕಾರ್ಯಕ್ರಮವನ್ನು ಜಾಗತಿಕ ಮಟ್ಟಕ್ಕೆ ವಿಸ್ತರಣೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಜುಲೈ 5 ರಂದು ನಡೆಯಲಿರುವ ಸಮಾವೇಶದಲ್ಲಿ ಪ್ರಧಾನಿ ಮೋದಿ ಅವರು ಮಾತನಾಡಲಿದ್ದಾರೆ.
ಜುಲೈ 5 ರಂದು ಸಂಜೆ 3 ಗಂಟೆಗೆ ಭಾರತೀಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ, ವಿದೇಶಾಂಗ ವ್ಯವಹಾರಗಳ ಸಚಿವಾಲಯ, ರಾಷ್ಟ್ರೀಯ ಆರೋಗ್ಯ ಸಮಿತಿಯ ಸಹಯೋಗದಲ್ಲಿ ಈ ಸಮಾವೇಶ ನಡೆಯಲಿದೆ.
ಈ ಸಮಾವೇಶದಲ್ಲಿ ಪ್ರಧಾನಿ ಮೋದಿ ಅವರು ವಿಶೇಷ ಸಂದೇಶವನ್ನು ಹಂಚಿಕೊಳ್ಳಲಿರುವುದಾಗಿ ರಾಷ್ಟ್ರೀಯ ಆರೋಗ್ಯ ಸಮಿತಿ ತನ್ನ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.