ಬೆಂಗಳೂರು: ಮೇಕೆದಾಟು ಬಳಿ ಸಮಾನಾಂತರಜಲಾಶಯ ಯೋಜನೆಯ ಅನುಕೂಲವನ್ನು ಕರ್ನಾಟಕ ಮತ್ತು ತಮಿಳುನಾಡು ಉಭಯ ರಾಜ್ಯಗಳೂ ಪಡೆಯಲಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಮೇಕೆದಾಟು ಯೋಜನೆಗೆ ಅಡ್ಡಿ ಮಾಡದಂತೆ ತಮಿಳುನಾಡಿಗೆ ಸಿಎಂ ಯಡಿಯೂರಪ್ಪ ಅವರು ಬರೆದಿರುವ ಅರ್ಜಿಗೆ ಅಲ್ಲಿನ ಮುಖ್ಯಮಂತ್ರಿ ಸ್ಪಂದಿಸಬೇಕು ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಈ ಯೋಜನೆಯಿಂದ ನಮಗೆ ಕುಡಿಯುವ ನೀರು ಸಿಗಲಿದೆ. ಮಳೆಗಾಲ ಕಡಿಮೆಯಾದ ಬಳಿಕ ತಮಿಳುನಾಡಿಗೆ ನೀರು ಕೊಡುವುದಕ್ಕೂ ಸಾಧ್ಯವಿದೆ. ಈ ವಿಚಾರ ಆ ರಾಜ್ಯಕ್ಕೂ ತಿಳಿದಿದೆ. ಆದರೂ ಸುಪ್ರೀಂಕೋರ್ಟ್ನಲ್ಲಿ ಆಕ್ಷೇಪಣೆಯನ್ನು ಸಲ್ಲಿಸಿದ್ದಾರೆ ಎಂದು ಅವರು ಹೇಳಿದ್ದಾರೆ. ಆದರೆ ಈ ವಿಚಾರದಲ್ಲಿ ರಾಜ್ಯಕ್ಕೆ ಸಂಪೂರ್ಣ ನ್ಯಾಯ ದೊರೆಯಲಿದೆ ಎಂದು ಅವರು ತಿಳಿಸಿದ್ದಾರೆ.
ಹಾಗೆಯೇ ಈ ಯೋಜನೆಯನ್ನು ರಾಜ್ಯಕ್ಕೆ ಹಂಚಿಕೆಯಾಗಿರುವ ನೀರು ಬಳಸಿಕೊಂಡೇ ಅನುಷ್ಠಾನ ಮಾಡಲಾಗುತ್ತಿದೆ. ಇದರಲ್ಲಿ ರಾಜ್ಯಕ್ಕೆ ನ್ಯಾಯ ದೊರೆಯುವ ವಿಶ್ವಾಸವನ್ನು ಬೊಮ್ಮಾಯಿ ವ್ಯಕ್ತಪಡಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.