ನವದೆಹಲಿ: ದೇಶದಲ್ಲಿ ಕೊರೋನಾ ಸೋಂಕಿತರ ಪ್ರಮಾಣ ಮತ್ತಷ್ಟು ಇಳಿಮುಖವಾಗಿದೆ. ಕಳೆದ 24 ಗಂಟೆಗಳಲ್ಲಿ 39,796 ಹೊಸ ಪ್ರಕರಣಗಳು ಪತ್ತೆಯಾಗಿದೆ. ಆ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 3,05,85,229 ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ವರದಿ ನೀಡಿದೆ.
ಹಾಗೆಯೇ ಕಳೆದ 24 ಗಂಟೆಯ ಅವಧಿಯಲ್ಲಿ 723 ಮಂದಿ ಕೊರೋನಾಗೆ ಬಲಿಯಾಗಿದ್ದು, ಆ ಮೂಲಕ ಮೃತಪಟ್ಟವರ ಸಂಖ್ಯೆ 4,02,728 ಕ್ಕೆ ಏರಿಕೆಯಾಗಿದೆ. ಸಕ್ರಿಯ ಸೋಂಕಿತರ ಸಂಖ್ಯೆ 4,82,071 ಗೆ ಇಳಿಕೆಯಾಗಿದೆ. ಹಲವು ದಿನಗಳ ಬಳಿಕ ದಾಖಲಾಗಿರುವ ಕಡಿಮೆ ಸೋಂಕಿತರ ಸಂಖ್ಯೆ ಇದಾಗಿದೆ. ಅದೇ ರೀತಿ ಕಳೆದ 24 ಗಂಟೆಗಳಲ್ಲಿ 44,352 ಮಂದಿ ಚೇತರಿಸಿಕೊಂಡಿದ್ದಾರೆ. ಆ ಮೂಲಕ ಚೇತರಿಕೆ ಕಂಡವರ ಸಂಖ್ಯೆ 2,97,00,430 ಗೆ ಏರಿಕೆಯಾಗಿದೆ.
ನಿನ್ನೆ ಒಂದೇ ದಿನದಲ್ಲಿ 15,22,504 ಜನರನ್ನು ಕೊರೋನಾ ಪರೀಕ್ಷೆಗೆ ಒಳಪಡಿಸಲಾಗಿದ್ದು, ಈ ವರೆಗೆ ದೇಶದಲ್ಲಿ 41,97,77,457 ಜನರನ್ನು ಕೊರೋನಾ ಪರೀಕ್ಷೆಗೆ ಒಳಪಡಿಸಿರುವುದಾಗಿ ಐಸಿಎಂಆರ್ ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.