ಇಂಪಾಲ್: ಅಸ್ಸಾಂನ ಸಿಲ್ಚಾರ್ನಿಂದ ಮಣಿಪುರದ ವೈಂಗೈಚುನ್ಟಾವ್ಗೆ ಇದೇ ಮೊದಲ ಬಾರಿಗೆ ಎಂಬಂತೆ ಕಳೆದ ಶುಕ್ರವಾರ ಪ್ರಾಯೋಗಿಕ ರೈಲು ಸಂಚಾರ ನಡೆಸಿದೆ.
ಮಣಿಪುರ ಗುಡ್ಡಗಾಡು ಪ್ರದೇಶವಾಗಿದ್ದು, ಇಲ್ಲಿಗೆ ಈ ವರೆಗೆ ರೈಲು ಸೇವೆ ಇರದೇ ಇದ್ದು, ಇದೀಗ ಅಲ್ಲಿನ ಜನರ ಬಹುಕಾಲದ ಕನಸು ನನಸಾಗುವ ಕಾಲ ಸನ್ನಿಹಿತವಾಗಿದೆ. ಮಣಿಪುರದಲ್ಲಿ ಸುಮಾರು 11 ಕಿಮೀ ಉದ್ದದ ರೈಲ್ವೆ ಮಾರ್ಗವನ್ನು ನಿರ್ಮಿಸಲಾಗಿದ್ದು, ಈ ಮಾರ್ಗದಲ್ಲಿ ರೈಲು ತನ್ನ ಪ್ರಾಯೋಗಿಕ ಸಂಚಾರವನ್ನು ಯಶಸ್ವಿಯಾಗಿ ನಡೆಸಿದೆ.
ಸ್ವಾತಂತ್ರ್ಯ ದೊರೆತು 74 ವರ್ಷಗಳ ಬಳಿಕ ಇದೇ ಮೊದಲ ಬಾರಿಗೆ ಮಣಿಪುರಕ್ಕೆ ರೈಲು ಬಂದು ತಲುಪಿದೆ. ಈ ಪರೀಕ್ಷಾರ್ಥ ಸಂಚಾರವನ್ನು ರಾಜಧಾನಿ ಎಕ್ಸ್ಪ್ರೆಸ್ ನಡೆಸಿದ್ದು, ವೈಂಗೈಚುನ್ಟಾವ್ ರೈಲು ನಿಲ್ದಾಣಕ್ಕೆ ಬಂದು ತಲುಪಿದೆ. ಈ ಮಾರ್ಗದಲ್ಲಿ ಮುಂದಿನ ದಿನಗಳಲ್ಲಿ ಪ್ರಯಾಣಿಕ ರೈಲು ಕಾರ್ಯ ನಿರ್ವಹಿಸಲಿದೆ ಎಂಬುದಾಗಿ ಭಾರತೀಯ ರೈಲ್ವೆಯ ಅಧಿಕಾರಿಗಳು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.