ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಇಳಿಮುಖವಾಗುತ್ತಿರುವ ಜೊತೆಗೆ ಬ್ಲ್ಯಾಕ್ ಫಂಗಸ್ ಸೋಂಕು ಸಹ ಕಡಿಮೆಯಾಗುತ್ತಿದೆ ಎಂದು ರಾಜ್ಯದ ಸರ್ಕಾರಿ ಆಸ್ಪತ್ರೆಗಳ ವೈದ್ಯರುಗಳು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ರಾಜ್ಯದಲ್ಲಿ ಕೊರೋನಾ ಸೋಂಕು ದಿನದಿಂದ ದಿನಕ್ಕೆ ಇಳಿಕೆಯಾಗುತ್ತಿದೆ. ಇದರೊಂದಿಗೆ ಬ್ಲ್ಯಾಕ್ ಫಂಗಸ್ ಸೋಂಕಿತರ ಸಂಖ್ಯೆಯೂ ಇಳಿಮುಖವಾಗುತ್ತಿದೆ. ಇದರಿಂದಾಗಿ ಕಪ್ಪು ಶಿಲೀಂಧ್ರ ಸೋಂಕಿಗೆ ನೀಡಲಾಗುವ ಅಂಪೋಟೆರಿಸಿನ್ ಬಿ ಔಷಧವೂ ಸಾಕಷ್ಟು ಪ್ರಮಾಣದಲ್ಲಿ ದಾಸ್ತಾನು ಇದೆ ಎಂದು ತಜ್ಞರು ಹೇಳುತ್ತಾರೆ.
ಈ ಸಂಬಂಧ ವಿಕ್ಟೋರಿಯಾ ಆಸ್ಪತ್ರೆಯ ಇಎನ್ಟಿ ವಿಭಾಗದ ಮುಖ್ಯಸ್ಥ ಹಾಗೂ ಪ್ರೊ. ಡಾ ವಿಶ್ವನಾಥ್ ಅವರು ಮಾತನಾಡಿದ್ದು, ರಾಜ್ಯದಲ್ಲಿ ಮ್ಯೂಕೋರ್ಮೈಕೋಸಿಸ್ 50% ಗಳಷ್ಟು ಇಳಿಮುಖವಾಗಿದೆ. ಇದಕ್ಕೆ ಚಿಕಿತ್ಸೆ ನೀಡಲು ಆಸ್ಪತ್ರೆಯಲ್ಲಿ ತಜ್ಞರ ತಂಡವಿದ್ದು, ಈ ವರೆಗೂ 100 ಕ್ಕೂ ಅಧಿಕ ಶಸ್ತ್ರಚಿಕಿತ್ಸೆಗಳನ್ನು ನಡೆಸಲಾಗಿರುವುದಾಗಿ ಹೇಳಿದ್ದಾರೆ. ಬ್ಲ್ಯಾಕ್ ಫಂಗಸ್ನಿಂದ ಮೃತಪಟ್ಟವರಿಗಿಂತ ಅಧಿಕ ಪ್ರಮಾಣದಲ್ಲಿ ಕೊರೋನಾ ಸೋಂಕಿನಿಂದ ಮೃತಪಟ್ಟವರೇ ಅಧಿಕ ಎಂದು ತಿಳಿಸಿದ್ದಾರೆ. ವಿಕ್ಟೋರಿಯಾ ಆಸ್ಪತ್ರೆಯಲ್ಲಿ 90% ರೋಗಿಗಳಿಗೆ ಯಶಸ್ವಿಯಾಗಿ ಚಿಕಿತ್ಸೆ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.