ನವದೆಹಲಿ: ಕೊರೋನಾ ಲಸಿಕಾ ಅಭಿಯಾನದಲ್ಲಿ ಲಸಿಕೆ ಪಡೆದವರ ಪೈಕಿ 78% ಜನರು ಪ್ರಧಾನಿ ಮೋದಿ ಅವರ ಕನಸಿನ ಡಿಜಿಟಲ್ ಇಂಡಿಯಾ ಯೋಜನೆಯ ಆನ್ ಸೈಟ್ ಯೋಜನೆಯ ಮೂಲಕವೇ ಲಸಿಕೆ ಪಡೆದಿದ್ದಾರೆ ಎಂದು ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್ಗೆ ತಿಳಿಸಿದೆ.
ಈ ಸಂಬಂಧ ಕೇಂದ್ರ ಸುಪ್ರೀಂಕೋರ್ಟ್ಗೆ ಅಫಿಡವಿಟ್ ಸಲ್ಲಿಕೆ ಮಾಡಿದ್ದು, ಸರ್ಕಾರದ ನಿರಂತರ ಡಿಜಿಟಲ್ ಪರಿಕ್ರಮಗಳ ಹೊರತಾಗಿಯೂ ದೇಶದಲ್ಲಿ ಒಟ್ಟು ವಿತರಣೆ ಮಾಡಲಾದ ಕೊರೋನಾ ಲಸಿಕೆ ವಿತರಣೆಯಲ್ಲಿ 78% ಆನ್ ಸೈಟ್ ಲಸಿಕೀಕರಣ ಆಗಿದೆ. ಇದಕ್ಕಾಗಿ ನಿಗದಿ ಮಾಡಲಾದ ಪೋರ್ಟಲ್ ಮೂಲಕವೇ ನೋಂದಾಯಿಸಿ, ನಿಗದಿತ ಲಸಿಕಾ ಕೇಂದ್ರಕ್ಕೆ ತೆರಳಿ ಲಸಿಕೆ ಪಡೆದವರು 78% ಆಗಿದ್ದು, ಇನ್ನೂ ಕೆಲವರು ಲಸಿಕಾ ಕೇಂದ್ರಕ್ಕೆ ತೆರಳಿ ನೇರ ನೋಂದಣಿ ಮುಖೇನ ಲಸಿಕೆ ಹಾಕಿಸಿಕೊಂಡಿದ್ದಾರೆ ಎಂದು ತಿಳಿಸಿದೆ.
ವಾಕ್ ಇನ್ ಸೌಲಭ್ಯ ಕಲ್ಪಿಸುವ ಮೊದಲು ಆನ್ಲೈನ್ ನೋಂದಣಿ ಮೂಲಕವೇ ಲಸಿಕೆ ಪಡೆಯುವುದು ಕಡ್ಡಾಯವಾಗಿತ್ತು. ಇದರಿಂದ ಗ್ರಾಮೀಣ ಭಾಗದ ಜನರಿಗೆ ಅನಾನುಕೂಲವಾಗುತ್ತಿದೆ ಎಂಬ ಮಾತುಗಳು ಕೇಳಿ ಬಂದ ಬಳಿಕ, ವಾಕ್ ಇನ್ ವ್ಯಾಕ್ಸಿನೇಶನ್ ಸೌಕರ್ಯಗಳನ್ನು ಒದಗಿಸಲಾಗಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.