ಬೆಂಗಳೂರು: ಕೇಂದ್ರ ಸಚಿವರಾಗಿದ್ದ ತಾವರ್ ಚಂದ್ ಗೆಹ್ಲೋಟ್ ಅವರು ಕರ್ನಾಟಕ ರಾಜ್ಯದ ನೂತನ ರಾಜ್ಯಪಾಲರಾಗಿ ನೇಮಕವಾಗಿದ್ದಾರೆ.
ಕರ್ನಾಟಕವನ್ನೊಳಗೊಂಡಂತೆ ದೇಶದ ಎಂಟು ರಾಜ್ಯಗಳಿಗೆ ರಾಜ್ಯಪಾಲರ ನೇಮಕ ಮಾಡಲಾಗಿದ್ದು, ಕೇಂದ್ರ ಸಮಾಜಿಕ, ನ್ಯಾಯ ಸಬಲೀಕರಣ ಸಚಿವರಾಗಿದ್ದ ತಾವರ್ ಚಂದ್ ಗೆಹ್ಲೋಟ್ ಅವರು ಕರ್ನಾಟಕದ ರಾಜ್ಯಪಾಲರಾಗಿ ನೇಮಕವಾಗಿದ್ದಾರೆ.
ರಾಜ್ಯದಲ್ಲಿ ಈ ವರೆಗೆ ರಾಜ್ಯಪಾಲರಾಗಿ ವಜೂಭಾಯ್ ವಾಲಾ ಕಾರ್ಯ ನಿರ್ವಹಿಸುತ್ತಿದ್ದರು. ಅವರ ಬಳಿಕ ಇದೀಗ ಗೆಹ್ಲೋಟ್ ರಾಜ್ಯದ ನೂತನ ರಾಜ್ಯಪಾಲರಾಗಿ ನೇಮಕವಾಗಿದ್ದಾರೆ.
ಗೋವಾ ರಾಜ್ಯಪಾಲರಾಗಿ ಪಿ. ಎಸ್. ಶ್ರೀಧರನ್ ಪಿಳ್ಳೈ, ತ್ರಿಪುರಾದ ರಾಜ್ಯಪಾಲರಾಗಿ ಸತ್ಯದೇವ ನಾರಾಯಣ್ ಆರ್ಯ, ಜಾರ್ಖಂಡ್ ರಾಜ್ಯಪಾಲರಾಗಿ ರಮೇಶ್ ಬೈಸ್, ಹರಿಯಾಣದ ರಾಜ್ಯಪಾಲರಾಗಿ ಬಂಡಾರು ದತ್ತಾತ್ರೇಯ, ಮಿಜೋರಾಂ ರಾಜ್ಯಪಾಲರಾಗಿ ಡಾ. ಹರಿ ಬಾಬು ಕಂಬಂಪತಿ, ಮಧ್ಯಪ್ರದೇಶದ ರಾಜ್ಯಪಾಲರಾಗಿ ಮಂಗುಭಾಯ್ ಛಗ್ಗನ್ಭಾಯ್ ಪಟೇಲ್, ಹಿಮಾಚಲ ಪ್ರದೇಶದ ರಾಜ್ಯಪಾಲರಾಗಿ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರನ್ನು ನೇಮಕ ಮಾಡಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.