ನವದೆಹಲಿ: ಬ್ರಿಟನ್ ಸೇನಾ ಮುಖ್ಯಸ್ಥರ ಜೊತೆಗೆ ಭಾರತೀಯ ಸೇನೆಯ ಮುಖ್ಯಸ್ಥ ಜನರಲ್ ಎಂ ಎಂ ನರವಣೆ ಅವರು ಚರ್ಚೆ ನಡೆಸಿದ್ದಾರೆ.
ಯುರೋಪ್ ಪ್ರವಾಸದಲ್ಲಿರುವ ಜನರಲ್ ನರವಣೆ ಅವರು ಬ್ರಿಟನ್ನ ಸೇನಾ ಮುಖ್ಯಸ್ಥ ಜನರಲ್ ಸರ್ ನಿಕೋಲಸ್ ಕಾರ್ಟರ್ ಅವರನ್ನು ಭೇಟಿ ಮಾಡಿದ್ದು, ಈ ಸಂದರ್ಭದಲ್ಲಿ ಉಭಯ ದೇಶಗಳ ನಡುವಿನ ರಕ್ಷಣಾ ಸಹಕಾರದ ಬಗ್ಗೆ ಚರ್ಚೆ ನಡೆಸಿರುವುದಾಗಿ ಮೂಲಗಳು ಹೇಳಿವೆ.
ಜುಲೈ 5 ರಂದು ನರವಣೆ ಅವರು ಬ್ರಿಟನ್ ತಲುಪಿದ್ದಾರೆ. ಇಲ್ಲಿ ಎರಡು ದಿನಗಳ ಕಾಲ ಇರಲಿರುವ ಅವರು ಬ್ರಿಟನ್ ರಕ್ಷಣಾ ಕಾರ್ಯದರ್ಶಿ ಬೆನ್ ವಾಲ್ಸೆ ಸೇರಿದಂತೆ ಇನ್ನಿತರರನ್ನು ಭೇಟಿ ಮಾಡಲಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.