ಬೆಂಗಳೂರು: ರಾಜ್ಯದಲ್ಲಿನ ಅತ್ಯಂತ ಹಿಂದುಳಿದ ತಾಲೂಕುಗಳ 114 ಸರ್ಕಾರಿ ಆಸ್ಪತ್ರೆಗಳಿಗೆ 791 ಆಕ್ಸಿಜನ್ ಕಾನ್ಸನ್ಟ್ರೇಟರ್ಗಳನ್ನು ನೀಡಲಾಗುತ್ತಿದೆ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ.
ಈ ಸಂಬಂಧ ಗಿವ್ ಇಂಡಿಯಾ ಫೌಂಡೇಶನ್ನ ಕಾರ್ಯಕ್ಕೆ ಚಾಲನೆ ನೀಡಿದ ಅವರು, ಕೊರೋನಾ ಮೂರನೇ ಅಲೆಯನ್ನು ನಿಯಂತ್ರಿಸುವ ಸಲುವಾಗಿ, ಅದನ್ನು ಸಮರ್ಥವಾಗಿ ಎದುರಿಸುವ ಹಿನ್ನೆಲೆಯಲ್ಲಿ ಈ ಕಾರ್ಯ ನಡೆಸಲಾಗುತ್ತಿದೆ. ಇದರಲ್ಲಿ 10 ಲೀಟರ್ ಸಾಮರ್ಥ್ಯದ 556 ಮತ್ತು 5 ಲೀ. ಸಾಮರ್ಥ್ಯದ 226 ಕಾನ್ಸನ್ಟ್ರೇಟರ್ಗಳು ಸೇರಿವೆ ಎಂದು ತಿಳಿಸಿದ್ದಾರೆ.
ಇದೇ ಸಂದರ್ಭದಲ್ಲಿ ಮಾತನಾಡಿದ ಡಿಸಿಎಂ ಡಾ. ಅಶ್ವತ್ಥ್ ನಾರಾಯಣ್, ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಟ.ಮಾಡುತ್ತಿರುವ ಸರ್ಕಾರದ ಜೊತೆ ಕೈಜೋಡಿಸಿರುವ ಗಿವ್ ಇಂಡಿಯಾ ಫೌಂಡೇಶನ್ನ ಕಾರ್ಯಕ್ಕೆ ಧನ್ಯವಾದ ತಿಳಿಸಿದ್ದಾರೆ. ಈ ಪ್ರತಿಷ್ಠಾನ ಈ ವರೆಗೆ 47 ಕೋಟಿ ರೂ. ಮೌಲ್ಯದ ಆಕ್ಸಿಜನ್ ಕಾನ್ಸನ್ಟ್ರೇಟರ್ಗಳನ್ನು ನೀಡಿರುವುದಾಗಿಯೂ ಅವರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.