ಮೈಸೂರು: ಕೊರೋನಾ ಸಂಕಷ್ಟ, ಲಾಕ್ಡೌನ್ ಕಾರಣದಿಂದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ ನಿತ್ಯ ಡಿಸೇಲ್ ಸಂಬಂಧ 1 ಕೋಟಿ ರೂ ನಷ್ಟ ಉಂಟಾಗುತ್ತಿದೆ. ಆದರೂ, ಬಸ್ ಪ್ರಯಾಣ ದರ ಏರಿಕೆ ಮಾಡುವುದಿಲ್ಲ ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೇಳಿದ್ದಾರೆ.
ಡಿಸೇಲ್ ಹಾಕಲು ನಿತ್ಯ 3 ಕೋಟಿ ರೂ. ಅಗತ್ಯ ಇದೆ. ಆದರೆ ಪ್ರತಿದಿನ 2.10 ಕೋಟಿ ರೂ. ಮಾತ್ರವೇ ಸಿಗುತ್ತಿದೆ. ಹೀಗಿದ್ದರೂ ಈ ಸಂಕಷ್ಟದ ಅವಧಿಯಲ್ಲಿ ಬಸ್ಸುಗಳ ಪ್ರಯಾಣ ದರ ಏರಿಕೆ ಮಾಡಿ ಜನಸಾಮಾನ್ಯರಿಗೆ ತೊಂದರೆ ನೀಡುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಕೊರೋನಾ ಬಳಿಕ ಸಾರಿಗೆ ಇಲಾಖೆ ಲಾಭದಲ್ಲಿಲ್ಲ. ನೌಕರರಿಗೆ ಈ ಸಂದರ್ಭದಲ್ಲಿ ವೇತನ ನೀಡುವುದಕ್ಕೆ ಕಷ್ಟವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸಿಎಂ ಯಡಿಯೂರಪ್ಪ ಅವರುಶ2484 ಕೋಟಿ ರೂ. ಗಳನ್ನು ನೀಡಿದ್ದು, ಅದರಿಂದ ನೌಕರರಿಗೆ ಸಂಬಳ ನೀಡಲಾಗುತ್ತಿದೆ ಎಂದು ಹೇಳಿದ್ದಾರೆ. ಆದರೂ ನೌಕರರಿಗೆ ವೇತನ ಕಡಿತ ಮಾಡಿಲ್ಲ. ಇಃತಹ ಸಂದರ್ಭದಲ್ಲಿ ಸಾರಿಗೆ ನೌಕರರ ವೇತನ ಹೆಚ್ಚಳ ಬೇಡಿಕೆ ಈಡೇರಿಕೆ ಕಷ್ಟ ಎಂದು ಅವರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.