ನವದೆಹಲಿ: ಭಾರೀ ಕುತೂಹಲ ಮೂಡಿಸಿರುವ ಕೇಂದ್ರಸರ್ಕಾರದ ಸಚಿವ ಸಂಪುಟ ವಿಸ್ತರಣೆ ಬುಧವಾರ ಸಂಜೆ ನಡೆಯಲಿದೆ ಎಂದು ಮೂಲಗಳು ತಿಳಿಸಿದ್ದಾರೆ.
ಜುಲೈ 7, ಬುಧವಾರದಂದು ಸಂಜೆ 5.30 ರ ವೇಳೆಗೆ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಆರಂಭವಾಗಲಿದೆ. 6 ಗಂಟೆಯ ವರೆಗೆ ನಡೆಯಲಿದೆ ಎಂದು ಸರ್ಕಾರದ ಮೂಲಗಳು ಹೇಳಿವೆ.
ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ಇಂದು ಪ್ರಧಾನಿ ಮೋದಿ ಅವರು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ ಪಿ ನಡ್ಡಾ ಮತ್ತು ಪ್ರಮುಖರ ಜೊತೆ ಇಂದು ನಡೆಸಬೇಕಿದ್ದ ಸಭೆ ರದ್ದುಗೊಳಿಸಲಾಗಿತ್ತು. ಆದರೆ ಇಂದು ಪ್ರಧಾನಿ ಅವರು ಗೃಹ ಸಚಿವ ಅಮಿತ್ ಶಾ, ಬಿಜೆಪಿ ಪ್ರಧಾನ ಕಾರ್ಯದರ್ಶಿ ಬಿ ಎಲ್ ಸಂತೋಷ್ ಅವರೊಂದಿಗೆ ಚರ್ಚೆ ನಡೆಸಿ ಸಂಪುಟಕ್ಕೆ ಸೇರಬೇಕಾದವರ ಹೆಸರುಗಳನ್ನು ಅಂತಿಮಗೊಳಿಸಿದ್ದಾರೆ ಎಂಬುದಾಗಿಯೂ ತಿಳಿದು ಬಂದಿದೆ.
ಎರಡನೇಯ ಅವಧಿಗೆ ಬಿಜೆಪಿ ಕೇಂದ್ರದಲ್ಲಿ ಆಡಳಿತದ ಚುಕ್ಕಾಣಿ ಹಿಡಿದ ಎರಡು ವರ್ಷಗಳ ಬಳಿಕ ಇದೇ ಮೊದಲ ಬಾರಿಗೆ ಸಚಿವ ಸಂಪುಟ ಮರು ರಚನೆಯಾಗುತ್ತಿದೆ ಎಂದು ಮೂಲಗಳು ಹೇಳಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.