ಬೆಂಗಳೂರು: ಕೊರೋನಾ ನಿಯಂತ್ರಣ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಸುಮಾರು 2 ಕೋಟಿ ಜನರಿಗೆ ಕನಿಷ್ಠ ಒಂದು ಡೋಸ್ ಕೊರೋನಾ ಲಸಿಕೆಯನ್ನು ನೀಡಲಾಗಿದೆ ಎಂದು ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಅವರು, ರಾಜ್ಯದಾದ್ಯಂತ 2 ಕೋಟಿ ಜನರಿಗೆ ಕನಿಷ್ಟ ಒಂದು ಡೋಸ್ ಕೊರೋನಾ ಲಸಿಕೆ ನೀಡುವ ಮೂಲಕ ಕರ್ನಾಟಕ ಕೊರೋನಾ ಲಸಿಕೆ ವಿತರಣೆಯಲ್ಲಿ ಮತ್ತೊಂದು ಮೈಲಿಗಲ್ಲು ಸಾಧಿಸಿದೆ ಎಂದು ತಿಳಿಸಿದ್ದಾರೆ.
ಹಾಗೆಯೇ ರಾಜ್ಯದಲ್ಲಿ ಲಸಿಕೀಕರಣ ಪ್ರಕ್ರಿಯೆಯನ್ನು ಮತ್ತಷ್ಟು ವೇಗಗೊಳಿಸುವ ನಿಟ್ಟಿನಲ್ಲಿ ರಾಜ್ಯಕ್ಕೆ ಮತ್ತಷ್ಟು ಹೆಚ್ಚಿನ ಪ್ರಮಾಣದಲ್ಲಿ ಲಸಿಕೆಯನ್ನು ಒದಗಿಸುವಂತೆಯೂ ಅವರು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ರಾಜ್ಯದಲ್ಲಿ ಕೊರೋನಾ ಎರಡನೇ ಅಲೆಯ ಆರ್ಭಟ ಇಳಿಮುಖವಾಗುತ್ತಿದೆ. ಈ ನಡುವೆ ಮೂರನೇ ಅಲೆಯ ಭೀತಿಯೂ ಇದೆ. ಹೀಗಾಗಿ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳೆರಡೂ ಕೊರೋನಾ ಲಸಿಕೆ ನೀಡಿಕೆಯ ವೇಗವನ್ನು ಮತ್ತಷ್ಟು ಹೆಚ್ಚಿಸುತ್ತಿವೆ.
Karnataka achieved yet another milestone in Covid-19 vaccination today with more than 2 crore people inoculated with atleast one dose of vaccine so far.
ರಾಜ್ಯಾದ್ಯಂತ 2 ಕೋಟಿ ಜನರಿಗೆ ಕನಿಷ್ಠ ಒಂದು ಡೋಸ್ ಲಸಿಕೆ ನೀಡುವ ಮೂಲಕ ಕರ್ನಾಟಕ ಕೊರೊನಾ ಲಸಿಕೆ ವಿತರಣೆಯಲ್ಲಿ ಮತ್ತೊಂದು ಮೈಲಿಗಲ್ಲು ಸಾಧಿಸಿದೆ. pic.twitter.com/daWmdVcFC4
— Dr Sudhakar K (@DrSudhakar_) July 6, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.