ನವದೆಹಲಿ: ದೇಶದಲ್ಲಿ 2021 ನೇ ಸಾಲಿನ ಜೆಇಇ ಮೇನ್ಸ್ ಪರೀಕ್ಷೆಗಳು ಎರಡು ಆವೃತ್ತಿಯಲ್ಲಿ ನಡೆಯಲಿದೆ ಎಂದು ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ತಿಳಿಸಿದ್ದಾರೆ.
ಮೊದಲ ಆವೃತ್ತಿಯ ಪರೀಕ್ಷೆ ಜುಲೈ 20 – 25 ರ ವರೆಗೆ ನಡೆಯಲಿದ್ದು, ಎರಡನೇ ಆವೃತ್ತಿ ಜುಲೈ 27 ರಿಂದ ಆಗಸ್ಟ್ 2 ರ ವರೆಗೆ ನಡೆಯಲಿದೆ. ಕೊರೋನಾ ಸಂಕಷ್ಟದ ಹಿನ್ನೆಲೆಯಲ್ಲಿ ಅರ್ಜಿ ಸಲ್ಲಿಸಲು ಸಾಧ್ಯವಾಗದ ಅಭ್ಯರ್ಥಿಗಳಿಗೆ ಮತ್ತೆ ಅರ್ಜಿ ಸಲ್ಲಿಕೆಗೆ ಅವಕಾಶ ಒದಗಿಸಲಾಗಿದೆ. ಮೊದಲ ಆವೃತ್ತಿಯಲ್ಲಿ ಪರೀಕ್ಷೆ ಬರೆಯುವ ಅಭ್ಯರ್ಥಿಗಳು ಜುಲೈ 6 – 8 ರ ವರೆಗೆ ಎನ್ಟಿಎಗಳಲ್ಲಿ ಅರ್ಜಿಗಳನ್ನು ಪಡೆಯಬಹುದು ಎಂದು ಅವರು ಹೇಳಿದ್ದಾರೆ.
ಎರಡನೇ ಆವೃತ್ತಿಯಲ್ಲಿ ಪರೀಕ್ಷೆ ಬರೆಯುವವರು ಜುಲೈ 9 – 12 ರ ವರೆಗೆ ಅರ್ಜಿಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಅಭ್ಯರ್ಥಿಗಳಿಗೆ ತಮ್ಮ ಪರೀಕ್ಷಾ ಕೇಂದ್ರದ ಬದಲಾವಣೆಗೂ ಅವಕಾಶ ಕಲ್ಪಿಸಲಾಗಿದೆ ಎಂದು ಪೋಖ್ರಿಯಾಲ್ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.