ಬೆಂಗಳೂರು: ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳು ಪರೀಕ್ಷೆಯನ್ನು ಸಮರ್ಥವಾಗಿ ಎದುರಿಸಲು ಅವರಿಗೆ ಆತ್ಮವಿಶ್ವಾಸ ತುಂಬುವ ನಿಟ್ಟಿನಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ವಿದ್ಯಾರ್ಥಿಗಳೊಂದಿಗೆ ವೀಡಿಯೋ ಸಂವಾದ ನಡೆಸಲಿದ್ದಾರೆ.
ಕೊರೋನಾ ನಡುವೆಯೇ ಈ ಬಾರಿ ವಿಶೇಷ ರೀತಿಯಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಗಳನ್ನು ನಡೆಸಲು ನಿರ್ಧರಿಸಲಾಗಿದ್ದು, ಈ ಹಿನ್ನೆಲೆಯಲ್ಲಿ ಸಂವಾದ ನಡೆಸಿ ವಿದ್ಯಾರ್ಥಿಗಳಲ್ಲಿ ಆತ್ಮಸ್ಥೈರ್ಯ ತುಂಬಲಿದ್ದಾರೆ.
ಜುಲೈ 14 ರಂದು ಈ ಸಂವಾದ ಕಾರ್ಯಕ್ರಮ ನಡೆಯಲಿದ್ದು, ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 1.30 ರ ವರೆಗೆ ವಿದ್ಯಾರ್ಥಿಗಳಿಗೆ ಸಚಿವರು ಆತ್ಮವಿಶ್ವಾಸ ತುಂಬಲಿದ್ದಾರೆ. ಆಯಾ ಜಿಲ್ಲಾ ಡಯಟ್ ಮತ್ತು ಡಿಡಿಪಿಐ ಕಚೇರಿಗಳಮೂಲಕ ವಿದ್ಯಾರ್ಥಿಗಳು ಈ ಸಂವಾದದಲ್ಲಿ ಭಾಗವಹಿಸಬಹುದು ಎಂದು ಸರ್ಕಾರದ ಮೂಲಗಳು ತಿಳಿಸಿವೆ.
ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳು ಪರೀಕ್ಷೆಯನ್ನು ಸಮರ್ಥವಾಗಿ ಎದುರಿಸಲು ಅವರಿಗೆ ಆತ್ಮವಿಶ್ವಾಸ ತುಂಬುವ ನಿಟ್ಟಿನಲ್ಲಿ ಮಾನ್ಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಶ್ರೀ ಎಸ್.ಸುರೇಶ್ ಕುಮಾರ್ ವಿದ್ಯಾರ್ಥಿಗಳೊಂದಿಗೆ ವೀಡಿಯೋ ಸಂವಾದ ನಡೆಸಲಿದ್ದಾರೆ.@CMofKarnataka @nimmasuresh pic.twitter.com/5opDjg8U8y
— DIPR Karnataka (@KarnatakaVarthe) July 7, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.