ನವದೆಹಲಿ: ಕೊರೋನಾ ಲಸಿಕೆಗೆ ಸಂಬಂಧಿಸಿದಂತೆ ಮಾಹಿತಿ ನೀಡಿರುವ ಕೇಂದ್ರ ಸರ್ಕಾರ, ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಬಳಿ 1.67 ಕೋಟಿಗೂ ಅಧಿಕ ಡೋಸ್ ಕೊರೋನಾ ಲಸಿಕೆಗಳಿರುವುದಾಗಿ ತಿಳಿಸಿದೆ.
ಈ ಸಂಬಂಧ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಹೇಳಿಕೆ ನೀಡಿದ್ದು, ದೇಶದ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಈವರೆಗೆ 37.43 ಕೋಟಿ ಪ್ರಮಾಣದಷ್ಟು ಲಸಿಕೆ ಪೂರೈಸಲಾಗಿದೆ. ಪ್ರಸ್ತುತ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಖಾಸಗಿ ಆಸ್ಪತ್ರೆಗಳಲ್ಲಿ 1,67,26,613 ಡೋಸ್ ಲಸಿಕೆಗಳು ಬಳಕೆಯಾಗದೆ ಉಳಿದಿವೆ ಎಂದು ಹೇಳಿದೆ.
ಇಂದಿನ ವರೆಗಿನ ಒಟ್ಟು ಅಂಕಿಅಂಶಗಳನ್ನು ಗಮನಿಸಿದರೆ, ತ್ಯಾಜ್ಯಗಳು ಸೇರಿದಂತೆ ಒಟ್ಟು 35,75,98,947 ಪ್ರಮಾಣಗಳಷ್ಟು ಲಸಿಕೆಗಳು ಬಳಕೆಯಾಗಿವೆ. ಇನ್ನು ಕೆಲವೇ ಸಮಯದಲ್ಲಿ 48,65,110 ಡೋಸ್ಗಳನ್ನು ವಿತರಣೆ ಮಾಡಲಾಗುತ್ತದೆ ಎಂದು ಸಚಿವಾಲಯ ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.