ನವದೆಹಲಿ: ಕಳೆದ 24 ಗಂಟೆಗಳಲ್ಲಿ ಪುಲ್ವಾಮಾದಲ್ಲಿ ಭಾರತೀಯ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ನಡೆದ ಕಾಳಗದಲ್ಲಿ ಐವರು ಉಗ್ರಗಾಮಿಗಳನ್ನು ಹೊಡೆದುರುಳಿಸಿರುವುದಾಗಿ ಜಮ್ಮು ಕಾಶ್ಮೀರ ಝೋನ್ ಪೊಲೀಸರು ತಿಳಿಸಿದ್ದಾರೆ.
ಪುಲ್ವಾಮಾದ ಪುಚಲ್ ಎಂಬಲ್ಲಿ ಭಾರತೀಯ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರು ಮುಖಾಮುಖಿಯಾಗಿದ್ದು, ಈ ಸಂದರ್ಭದಲ್ಲಿ ಪರಸ್ಪರ ದಾಳಿ – ಪ್ರತಿದಾಳಿ ನಡೆದಿದೆ. ಈ ದಾಳಿಯಲ್ಲಿ ಐವರು ಉಗ್ರರನ್ನು ಭದ್ರತಾ ಪಡೆಗಳು ಹೊಡೆದುರುಳಿಸಿರುವುದಾಗಿ ಅಧಿಕಾರಿಗಳು ಹೇಳಿದ್ದಾರೆ.
ಈ ಸಂದರ್ಭದಲ್ಲಿ ಭಾರತೀಯ ಭದ್ರತಾ ಪಡೆಗೆ ಯಾವುದೇ ತರದ ಹಾನಿ ಸಂಭವಿಸಿಲ್ಲ. ಈ ರೀತಿಯ ಯಶಸ್ವಿ ಕಾರ್ಯಾಚರಣೆ ನಡೆಸಿದ ಪೊಲೀಸರು ಮತ್ತು ಭದ್ರತಾ ಪಡೆಗಳಿಗೆ ಅಭಿನಂದನೆಗಳನ್ನು ಸಲ್ಲಿಸುವುದಾಗಿ ಜಮ್ಮು ಕಾಶ್ಮೀರದ ಐಜಿ ವಿಜಯ ಕುಮಾರ್ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.