ನವದೆಹಲಿ: ದೇಶದಲ್ಲಿ ಕೊರೋನಾ ಎರಡನೇ ಅಲೆಗೆ ತುತ್ತಾಗುತ್ತಿರುವವರ ಪ್ರಮಾಣ ಇಳಿಮುಖವಾಗುತ್ತಿದೆ.
ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 45,892 ಜನರಲ್ಲಿ ಹೊಸದಾಗಿ ಕೊರೋನಾ ಸೋಂಕು ಕಾಣಿಸಿಕೊಂಡಿದೆ. 817 ಮಂದಿ ಸೋಂಕಿತರು ಮೃತಪಟ್ಟಿರುವುದಾಗಿ ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಆ ಮೂಲಕ ಗುರುವಾರ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3,07,09,557 ಕ್ಕೆ ತಲುಪಿದೆ. ಸಾವಿನ ಸಂಖ್ಯೆ 4,05,028 ಎಂದು ಸಚಿವಾಲಯ ವರದಿ ನೀಡಿದೆ. ಸಕ್ರಿಯ ಸೋಂಕಿತರ ಪ್ರಮಾಣ 4,60,704 ಕ್ಕೆ ಇಳಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 44,291 ಮಂದಿ ಗುಣಮುಖರಾಗಿದ್ದು, ಆ ಮೂಲಕ ಈ ವರೆಗೆ 2,98,43,852 ಮಂದಿ ಚೇತರಿಸಿಕೊಂಡಿರುವುದಾಗಿ ಸಚಿವಾಲಯ ಹೇಳಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.