ಲಕ್ನೋ: ಉತ್ತರ ಪ್ರದೇಶದ ಭಯೋತ್ಪಾದನಾ ನಿಗ್ರಹ ದಳದಲ್ಲಿ ಮಹಿಳಾ ಪೊಲೀಸ್ ತಂಡವನ್ನು ರಚಿಸಲಾಗುತ್ತಿದ್ದು, ಈ ತಂಡದಲ್ಲಿ ಒಟ್ಟು 58 ಮಂದಿ ಸಿಬ್ಬಂದಿ, ಶ್ವಾನ ದಳ, ಬಾಂಬ್ ವಿಲೇವಾರಿ ದಳ, ವೈರ್ಲೆಸ್ ಟ್ರ್ಯಾಪಿಂಗ್ ಯುನಿಟ್ಗಳನ್ನು ಹೊಂದಿರಲಿದೆ.
ಈ ತಂಡವನ್ನು ಸ್ಪಾಟ್(ವಿಶೇಷ ಪೊಲೀಸ್ ಕಾರ್ಯಾಚರಣೆ ತಂಡ) ಎಂಬ ಹೆಸರಿನಲ್ಲಿ ಗುರುತಿಸಲಾಗುತ್ತದೆ. ಈ ತಂಡದ ರಚನೆಗೆ ಸಂಬಂಧಿಸಿದಂತೆ ಸಿಎಂ ಯೋಗಿ ಸರ್ಕಾರದ ಗೃಹ ಇಲಾಖೆಯ ಅಧಿಕಾರಿಗಳ ಜೊತೆಗೆ ಚರ್ಚೆ ನಡೆಸಲಾಗಿದ್ದು, ಆ ಬಳಿಕ ಅನುಮೋದನೆ ಮತ್ತು ಬಜೆಟ್ಗೆ ಸಂಬಂಧಿಸಿದಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಎಟಿಎಸ್ನ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.
ಈ ಸ್ಪಾಟ್ ಗುಂಪಿನಲ್ಲಿ ಅಪಹರಣ ವಿರೋಧಿ, ಭಯೋತ್ಪಾದಕ ದಾಳಿಗಳಂತಹವುಗಳನ್ನು ಮಟ್ಟ ಹಾಕುವ ವಿಶೇಷ ತರಬೇತಿ ಪಡೆದ ವಿಶೇಷ ಘಟಕ, ಸ್ಪಾಟ್ ಬಿಎಸ್ಎಫ್, ಸಿಐಎಸ್ಎಫ್, ಐಟಿಬಿಪಿ ಮತ್ತು ಇತರ ಅರೆಸೈನಿಕ ಪಡೆಗಳಿಂದ ತರಬೇತಿ ಪಡೆದ ಸಿಬ್ಬಂದಿಗಳು ಇರಲಿದ್ದಾರೆ. ಇಂತಹ ಸವಾಲಿನ ಕೆಲಸಗಳಲ್ಲಿ ಮಹಿಳೆಯರ ಪ್ರಾತಿನಿಧ್ಯ ಹೆಚ್ಚಿಸುವ ಮತ್ತು ಸೂಕ್ಷ್ಮ ಸ್ಥಳಗಳಲ್ಲಿ ಈ ತಂಡವನ್ನು ನಿಯೋಜನೆ ಮಾಡುವ ನಿಟ್ಟಿನಲ್ಲಿಯೂ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಎಡಿಜಿ ಕಾನೂನು ಸುವ್ಯವಸ್ಥೆ ಅಧಿಕಾರಿ ಪ್ರಶಾಂತ್ ಕುಮಾರ್ ವಾರಣಾಸಿ ಅವರು ಆಗ್ರಾ, ಖೇರಿ, ಶ್ರಾವಸ್ತಿಗಳಲ್ಲಿ ಸ್ಪಾಟ್ ಮಹಿಳಾ ತಂಡಗಳ ಘಟಕಗಳನ್ನು ರಚಿಸುವ ಪ್ರಸ್ತಾಪವನ್ನು ಸರ್ಕಾರದ ಮುಂದಿಟ್ಟಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.