ನವದೆಹಲಿ: ರಾಜಸ್ಥಾನದ ಮಹಾನಗರ ಪಾಲಿಕೆಗಳಿಗೆ ನಡೆದ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿ ಭರ್ಜರಿ ಗೆಲುವು ದಾಖಲಿಸಿದೆ. ಪ್ರತಿಪಕ್ಷ ಕಾಂಗ್ರೆಸ್ ಸೋಲಿನ ಕಹಿಯನ್ನು ಅನುಭವಿಸಿದೆ.
ಬಿಜೆಪಿ ಗೆಲುವಿನ ಬಗ್ಗೆ ಸಂತಸ ವ್ಯಕ್ತಪಡಿಸಿರುವ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ, ಮುಖ್ಯಮಂತ್ರಿ ವಸುಂಧರಾ ರಾಜೆ ಮತ್ತು ಬಿಜೆಪಿ ಕಾರ್ಯಕರ್ತರಿಗೆ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ಅಲ್ಲದೇ ಈ ಫಲಿತಾಂಶ ಕಾಂಗ್ರೆಸ್ ಪಕ್ಷಕ್ಕೆ ಸತ್ಯದ ಕನ್ನಡಿಯನ್ನು ತೋರಿಸಿದೆ ಎಂದಿದ್ದಾರೆ.
‘ಈ ಜಯ ಬಿಜೆಪಿಯ ಅಭಿವೃದ್ಧಿ ಯೋಜನೆಗಳಿಗೆ ಮತ್ತು ರಾಜ್ಯದ ಉತ್ತಮ ಆಡಳಿತಕ್ಕೆ ದೊರೆತ ಜಯ. ರಾಷ್ಟ್ರ ರಾಜಕಾರಣದಲ್ಲಿ ಮೂಲೆಗುಂಪಾಗಿರುವ ಕಾಂಗ್ರೆಸ್ ಗಂಭೀರ ಆತ್ಮಾವಲೋಕನ ಮಾಡಿಕೊಳ್ಳಬೇಕು. ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿಯವರ ಆರೋಪ ಆಧಾರ ರಹಿತ, ಅಭಿವೃದ್ಧಿ ವಿರೋಧಿ ಮತ್ತು ನೆಗೆಟಿವ್ ಪಾಲಿಟಿಕ್ಸ್ನ ವಿರುದ್ಧ ರಾಜಸ್ಥಾನ ಮತ ಚಲಾಯಿಸಿದೆ’ ಎಂದಿದ್ದಾರೆ.
ಬಿಜೆಪಿ ಸರ್ಕಾರದ ಮೇಲೆ ನಂಬಿಕೆ ಇಟ್ಟು ಮತ ಚಲಾಯಿಸಿದ ರಾಜಸ್ಥಾನದ ಜನತೆಗೆ ಪ್ರಧಾನಿ ನರೇಂದ್ರ ಮೋದಿಯವರು ಧನ್ಯವಾದಗಳನ್ನು ಅರ್ಪಿಸಿದ್ದಾರೆ.
129 ಮಹಾನಗರ ಪಾಲಿಕೆಗಳಲ್ಲಿ 66 ರಲ್ಲಿ ಬಿಜೆಪಿ ಗೆಲುವನ್ನು ಪಡೆದುಕೊಂಡಿದೆ, 35ನ್ನು ಕಾಂಗ್ರೆಸ್ ಜಯಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.