ಬೆಂಗಳೂರು: ಕರ್ತವ್ಯದ ಅವಧಿಯಲ್ಲಿ ಮೊಬೈಲ್ ಬಳಕೆ, ಕಾಲಹರಣ ಮಾಡುವುದು, ಸಮವಸ್ತ್ರ ಧರಿಸದೆ ಅಶಿಸ್ತು ತೋರುವುದು ಮೊದಲಾದಂತೆ ಇನ್ನಿತರ ನಿಯಮಗಳನ್ನು ಪಾಲಿಸದ ನ್ಯಾಯಾಧೀಶರ ಭದ್ರತಾ ಸಿಬ್ಬಂದಿಗಳಿಗೆ ರಾಜ್ಯ ಸರ್ಕಾರ ಎಚ್ಚರಿಕೆ ನೀಡಿದೆ.
ಹೈಕೋರ್ಟ್ ನ್ಯಾಯಾಧೀಶರ ಭದ್ರತಾ ಸಿಬ್ಬಂದಿಗಳಿಗೆ ಸಂಬಂಧಿಸಿದಂತೆ ರಾಜ್ಯ ಉಪ ಪೊಲೀಸ್ ಆಯುಕ್ತರು ಸುತ್ತೋಲೆ ಹೊರಡಿಸಿದ್ದು, ಅದರಲ್ಲಿ ಸೂಚಿಸಲಾದ ಎಲ್ಲಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕು ಎಂದು ಸರ್ಕಾರ ಹೇಳಿದೆ. ಹಾಗೆಯೇ ಭದ್ರತಾ ಸಿಬ್ಬಂದಿ ಹೆಚ್ಚು ಚುರುಕು, ಎಚ್ಚರಿಕೆ ಯಿಂದ ಕೆಲಸ ಮಾಡಬೇಕು ಎಂದು ತಿಳಿಸಿದೆ.
ಸರ್ಕಾರದ ನಿಯಮಗಳನ್ನು ಪಾಲಿಸದೆ ಅಶಿಸ್ತಿನಿಂದ ವರ್ತಿಸುತ್ತಿರುವ ಬಗ್ಗೆ ಸರ್ಕಾರಕ್ಕೆ ದೂರುಗಳು ಬಂದಿವೆ. ಶಿಸ್ತುಪಾಲನೆ ಅತ್ಯಗತ್ಯವಾಗಿದ್ದು, ಕರ್ತವ್ಯದ ವೇಳೆ ಸ್ವಚ್ಛವಾದ ಸಮವಸ್ತ್ರ, ಪಾಲಿಶ್ ಮಾಡಿರುವ ಶೂಗಳನ್ನು ಧರಿಸಬೇಕು. ಜೊತೆಗೆ ಮೊಬೈಲ್ ಬಳಕೆ ಮಾಡುವಂತಿಲ್ಲ ಎಂದು ಸರ್ಕಾರ ಕಟ್ಟಿನಿಟ್ಟಾಗಿ ತಿಳಿಸಿದೆ.
ಹಾಗೆಯೇ ಶಸ್ತ್ರಾಸ್ತ್ರಗಳನ್ನು ಪರಿಶೀಲಿಸುವುದು, ರಜೆ ಪಡೆಯುವ ಸಂದರ್ಭದಲ್ಲಿ ಸಂಬಂಧಿಸಿದ ಅಧಿಕಾರಿಗಳ ಅನುಮತಿ ಪಡೆಯುವುದು, ನ್ಯಾಯಾಧೀಶರ ನಿವಾಸದ ಬಳಿ ಓಡಾಡುವವರ ಮೇಲೆ ನಿಗಾ ಇರಿಸುವುದು ಮೊದಲಾದವುಗಳನ್ನು ಮಾಡುವಂತೆಯೂ ಸರ್ಕಾರ ಸೂಚಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.