ನವದೆಹಲಿ: ಭಾರತದ ಐಟಿ ನಿಯಮಗಳನ್ನು ಈವರೆಗೆ ಕಡೆಗಣಿಸಿರುವ ಟ್ವಿಟ್ಟರ್ ಕೊನೆಗೂ ಇಲ್ಲಿನ ನಿಯಮಕ್ಕೆ ಅನುಗುಣವಾಗಿ ನಡೆದುಕೊಳ್ಳಲು ಆರಂಭಿಸಿದೆ. ಇದಕ್ಕೆ ಪೂರಕ ಎಂಬಂತೆ ಭಾರತೀಯನನ್ನು ತನ್ನ ಮುಖ್ಯ ಕುಂದುಕೊರತೆ ಅಧಿಕಾರಿಯನ್ನಾಗಿ ನೇಮಕ ಮಾಡಿದೆ.
ಹಾಗೆಯೇ ಶೀಘ್ರದಲ್ಲೇ ಭಾರತದ ಹೊಸ ಐಟಿ ನಿಯಮಗಳ ಪಾಲನೆಯಲ್ಲಿ ಯಾವುದೇ ಸಮಸ್ಯೆಯಾಗದಂತೆ ಮತ್ತಿಬ್ಬರು ಅಧಿಕಾರಿಗಳನ್ನು ನೇಮಕ ಮಾಡುವುದಾಗಿಯೂ ತಿಳಿಸಿದೆ. ಮುಂದಿನ 8 ವಾರಗಳೊಳಗೆ ಈ ನೇಮಕಾತಿ ಪ್ರಕ್ರಿಯೆಯನ್ನು ಸಂಪೂರ್ಣಗೊಳಿಸಲು ಎಲ್ಲಾ ರೀತಿಯ ಪ್ರಯತ್ನಗಳನ್ನು ನಡೆಸಲಾಗುವುದು ಎಂದು ತಿಳಿಸಿದೆ.
ಈ ಹಿಂದೆ ನವದೆಹಲಿ ಹೈಕೋರ್ಟ್ ಟ್ವಿಟ್ಟರ್ಗೆ ಭಾರತೀಯ ನೆಲದಲ್ಲಿ ಇಲ್ಲಿನ ಐಟಿ ನಿಯಮಗಳನ್ನು ಪಾಲಿಸುವಂತೆ ಎಚ್ಚರಿಕೆ ನೀಡಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.