ನವದೆಹಲಿ: ಬ್ರಿಟನ್ ಮತ್ತು ಇಟಲಿಗೆ ಪ್ರವಾಸ ತೆರಳಿರುವ ಭಾರತೀಯ ಸೇನಾ ಮುಖ್ಯಸ್ಥ ಎಂ. ಎಂ. ನರವಾಣೆ ಅವರು ಇಂದು ರೋಮ್ನಲ್ಲಿ ಇಟಲಿಯ ರಕ್ಷಣಾ ಸಚಿವ ಲೊರೆಂಝೋ ಗುಯೆರಿನಿ ಮತ್ತು ರಕ್ಷಣಾ ವಿಭಾಗದ ಮುಖ್ಯಸ್ಥ ಲೆ. ಜನರಲ್ ಪಿಯೆಟ್ರೋ ಸೆರಿನೊ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
ಬುಧವಾರದಂದು ರೋಮ್ಗೆ ತಲುಪಿರುವ ನರವಾಣೆ ಅವರು, ಇಟಲಿಯ ರಕ್ಷಣಾ ಮುಖ್ಯಸ್ಥರನ್ನು ಭೇಟಿಯಾಗಿ ಉಭಯ ರಾಷ್ಟ್ರಗಳ ನಡುವಿನ ರಕ್ಷಣಾ ಕ್ಷೇತ್ರಗಳ ಸಂಬಂಧವನ್ನು ಇನ್ನಷ್ಟು ಬಲಪಡಿಸುವ ನಿಟ್ಟಿನಲ್ಲಿ ಸುಧೀರ್ಘ ಮಾತುಕತೆ ನಡೆಸಿದ್ದಾರೆ. ಈ ಸಂಬಂಧ ಎರಡೂ ರಾಷ್ಟ್ರಗಳ ಅಧಿಕಾರಿಗಳು ಪರಸ್ಪರ ಅಭಿಪ್ರಾಯ ವಿನಿಮಯ ಮಾಡಿಕೊಂಡಿರುವುದಾಗಿ ಅಲ್ಲಿನ ಅಧಿಕಾರಿಗಳು ತಿಳಿಸಿದ್ದಾರೆ.
ಈ ಪ್ರವಾಸದ ಸಂದರ್ಭದಲ್ಲಿ ನರವಾಣೆ ಅವರು, ಇಟಲಿ ನಗರದ ಕ್ಯಾಸಿನೋದಲ್ಲಿ ನಿರ್ಮಾಣ ಮಾಡಲಾದ ಭಾರತೀಯ ಸೇನಾ ಸ್ಮಾರಕವನ್ನು ಉದ್ಘಾಟಿಸಲಿದ್ದಾರೆ. ಈ ಸ್ಮಾರಕವನ್ನು ವಿಶ್ವದ ಎರಡನೇ ಮಹಾಯುದ್ಧದ ಸಂದರ್ಭದಲ್ಲಿ ಹುತಾತ್ಮರಾದ ಭಾರತೀಯ ಯೋಧರ ಸ್ಮರಣಾರ್ಥ ನಿರ್ಮಾಣ ಮಾಡಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.