ನವದೆಹಲಿ: ಈ ದೇಶದಲ್ಲಿ ವಾಸಿಸುವವರು ಮತ್ತು ಕಾರ್ಯ ನಿರ್ವಹಿಸುವವರು ಇಲ್ಲಿನ ಕಾನೂನುಗಳನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕು ಎಂದು ನೂತನ ಮಾಹಿತಿ ಮತ್ತು ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ ಅವರು ಎಚ್ಚರಿಸಿದ್ದಾರೆ.
ಈ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಾರತದಲ್ಲಿ ವಾಸಿಸುವವರು ಮತ್ತು ಇಲ್ಲಿ ಕೆಲಸ ಮಾಡುವವರು ಇಲ್ಲಿನ ಕಾನೂನುಗಳನ್ನು ಪಾಲಿಸಬೇಕಾಗುತ್ತದೆ ಎಂದು ಹೇಳಿದ್ದಾರೆ.
ದೇಶದಲ್ಲಿನ ನೂತನ ಐಟಿ ನಿಯಮಗಳನ್ನು ಅನುಸರಿಸದ ಟ್ವಿಟ್ಟರ್ ವಿರುದ್ಧ ಅವರು ಈ ಎಚ್ಚರಿಕೆ ನೀಡಿದ್ದಾರೆ. ಟ್ವಿಟ್ಟರ್ ಈ ದೇಶದ ಕಾನೂನುಗಳನ್ನು ಪಾಲಿಸುತ್ತಿಲ್ಲ ಎಂಬ ಆರೋಪವಿದೆ. ಈ ಸಂಬಂಧ ಕೇಂದ್ರ ಸರ್ಕಾರ ಮತ್ತು ಟ್ವಿಟ್ಟರ್ ನಡುವೆ ವಿವಾದಗಳೇರ್ಪಟ್ಟಿದೆ. ಈ ಹಿನ್ನೆಲೆಯಲ್ಲಿ ಸಚಿವರು ಈ ಎಚ್ಚರಿಕೆಯನ್ನು ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.