ನವದೆಹಲಿ: ಕೊರೋನಾ ಎರಡನೇ ಅಲೆಯ ಸಂಕಷ್ಟ ಮತ್ತು ಮೂರನೇ ಅಲೆಯ ಭೀತಿಯ ನಡುವೆಯೂ ಜೂನ್ ತಿಂಗಳಲ್ಲಿ ದೇಶದಲ್ಲಿ ಔದ್ಯೋಗಿಕ ನೇಮಕಾತಿ ಚಟುವಟಿಕೆಯಲ್ಲಿ 15% ಏರಿಕೆಯಾಗಿದೆ.
ಈ ಸಂಬಂಧ ಔದ್ಯೋಗಿಕ ಶೋಧ ಜಾಲತಾಣ ನೌಕ್ರಿ ಡಾಟ್ ಕಾಂ ‘ನೌಕ್ರಿ ಜಾಬ್ ಸ್ಪೀಕ್’ ವರದಿಯನ್ನು ಬಿಡುಗಡೆ ಮಾಡಿದೆ. ಇದರಲ್ಲಿ ದೇಶದಲ್ಲಿ ಜೂನ್ 2021 ರಲ್ಲಿ 15% ನೇಮಕಾತಿ ಪ್ರಕ್ರಿಯೆಗಳು ಏರಿಕೆಯಾಗಿದೆ ಎಂದು ತಿಳಿಸಿದೆ. ಮೇ ತಿಂಗಳಲ್ಲಿ 2,047 ರಷ್ಟಿದ್ದ ನೇಮಕಾತಿ, ಜೂನ್ನಲ್ಲಿ 2,359 ಕ್ಕೆ ಏರಿಕೆಯಾಗಿದೆ ಎಂದು ತಿಳಿಸಿದೆ.
ಇದು ದೇಶದ ಸ್ಥಿತಿ ಸ್ಥಾಪಕತ್ವ ಮತ್ತು ಚೇತರಿಕೆಯ ಸೂಚನೆಯಾಗಿದ್ದು, ಸಾಂಕ್ರಾಮಿಕ ಸಂದರ್ಭದಲ್ಲಿಯೂ ಸ್ಥಿರತೆ ಕಾಪಾಡಿಕೊಂಡಿದೆ ಎಂದು ಈ ವರದಿ ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.