ನವದೆಹಲಿ: ಮುಂದಿನ ವರ್ಷ ದೇಶಕ್ಕೆ ಸ್ವಾತಂತ್ರ್ಯ ಲಭಿಸಿ 75 ವರ್ಷಗಳಾಗುತ್ತಿದ್ದು, ಈ ಹಿನ್ನೆಲೆಯಲ್ಲಿ 75 ಉಪಗ್ರಹಗಳ ಉಡಾವಣೆ ಮಾಡಲಾಗುತ್ತದೆ. ಇದರಲ್ಲಿ ಮಲ್ಲೇಶ್ವರಂನ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ ಎಂದು ಡಿಸಿಎಂ ಡಾ. ಅಶ್ವತ್ಥ್ ನಾರಾಯಣ್ ಹೇಳಿದ್ದಾರೆ.
ಈ ಶಾಲೆಯು ಉಪಗ್ರಹ ಉಡಾವಣೆ ಮಾಡಲಿರುವ ಭಾರತದ ಮೊದಲ ಸರ್ಕಾರಿ ಶಾಲೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಲಿದೆ. ಈ ಉಪಗ್ರಹ ಉಡಾವಣೆ ಕಾರ್ಯಕ್ರಮ 75 ನೇ ಸ್ವಾತಂತ್ರ್ಯೋತ್ಸವದ ಭಾಗವಾಗಲಿದೆ ಎಂದು ಅವರು ತಿಳಿಸಿದ್ದಾರೆ.
ಈ ಉಪಗ್ರಹಗಳ ವಿನ್ಯಾಸ, ತಯಾರಿಕೆಗಳು ಶಾಲಾ ಹಂತದಲ್ಲೇ ಇದ್ದು, ಇಸ್ರೋ ಮತ್ತು ಭಾರತೀಯ ತಾಂತ್ರಿಕ ಕಾಂಗ್ರೆಸ್ ಸಂಘ ಸಹಕಾರ ನೀಡಲಿದೆ ಎಂದು ತಿಳಿಸಿದ್ದಾರೆ. ಈ ಉಡಾವಣೆಯಲ್ಲಿ ಮತ್ತಷ್ಟು ಶಾಲೆಗಳ ವಿದ್ಯಾರ್ಥಿಗಳು ಭಾಗವಹಿಸಲಿರುವುದಾಗಿ ಅವರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.