ನವದೆಹಲಿ: ಮಾಡಿಕೊಳ್ಳಲಾದ ಒಪ್ಪಂದಗಳನ್ನು ಸರಿಯಾಗಿ ಪಾಲನೆ ಮಾಡದಿರುವುದೇ ಭಾರತ – ಚೀನಾ ನಡುವಿನ ಸಂಬಂಧದ ಅಡಿಪಾಯಕ್ಕೆ ಧಕ್ಕೆಯುಂಟು ಮಾಡುತ್ತಿದೆ ಎಂದು ವಿದೇಶಾಂಗ ಸಚಿವ ಎಸ್. ಜೈಶಂಕರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಮಾಸ್ಕೋದಲ್ಲಿ ನಡೆದ ವಿಶ್ವ ಆರ್ಥಿಕತೆ ಮತ್ತು ಅಂತರಾಷ್ಟ್ರೀಯ ಸಂಬಂಧಗಳ ಕುರಿತ ಉಪನ್ಯಾಸದಲ್ಲಿ ಮಾತನಾಡಿದ ಅವರು, ಕಳೆದ ಒಂದು ವರ್ಷಗಳ ಹಿಂದೆ ಉಭಯ ರಾಷ್ಟ್ರಗಳ ಸಂಬಂಧ ಸ್ಥಿರವಾಗಿರುತ್ತು. ಆದರೆ ಕಳೆದೊಂದು ವರ್ಷದಿಂದ ಉಭಯ ರಾಷ್ಟ್ರಗಳ ನಡುವೆ ನಡೆದ ಒಪ್ಪಂದಗಳನ್ನು ಚೀನಾ ಪಾಲನೆ ಮಾಡುವಲ್ಲಿ ವಿಫಲವಾಗಿದೆ ಎಂದು ಹೇಳಿದ್ದಾರೆ.
ಸಚಿವರು ಮೂರು ದಿನಗಳ ಮಾಸ್ಕೋ ಪ್ರವಾಸದಲ್ಲಿದ್ದು, ಈ ವೇಳೆ ಅಲ್ಲಿನ ವಿದೇಶಾಂಗ ಸಚಿವ ಸರ್ಜಿ ಲವ್ರೋವ್ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸುವ ಸಾಧ್ಯತೆ ಇದೆ. ಹಾಗೆಯೇ ಅಮೆರಿಕ ತನ್ನ ಸೇನಾಪಡೆಯನ್ನು ಹಿಂದೆಗೆದುಕೊಂಡ ಬಳಿಕ ಅಪ್ಘಾನಿಸ್ಥಾನದ ಜೊತೆಗಿನ ಸಂಬಂಧ ಹದೆಗೆಟ್ಟ ಬಗೆಗೂ ಚರ್ಚೆ ನಡೆಸಲಿದ್ದಾರೆ ಎಂದು ಮೂಲಗಳು ಹೇಳಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.