ಬೆಂಗಳೂರು: ಪರವಾನಗಿ ಇಲ್ಲದ ಲೇವಾದೇವಿದಾರರು, ಹಣಕಾಸು ಸಂಸ್ಥೆಗಳಿಂದ ಸಾಲ ಪಡೆದು, ಮರುಪಾವತಿ ಮಾಡಲಾಗದೆ, ಆ ಹೊರೆಯಿಂದ ರೈತರು ಆತ್ಮಹತ್ಯೆ ಮಾಡಿಕೊಂಡರೆ ಅದಕ್ಕೆ ರಾಜ್ಯ ಸರ್ಕಾರ ಪರಿಹಾರ ನೀಡುವುದಿಲ್ಲ ಎಂದು ಹೇಳಿದೆ.
ಯಾದಗಿರಿಯ ರೈತರೊಬ್ಬರು ಖಾಸಗಿ ಸಾಲದಿಂದ ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಸಂಬಂಧ ಖಾಸಗಿ ಸಾಲದಿಂದ ಆತ್ಮಹತ್ಯೆ ಮಾಡಿಕೊಂಡ ರೈತ ಕುಟುಂಬಗಳಿಗೆ ಪರಿಹಾರ ನೀಡಲು ಸರ್ಕಾರ ಏನು ನಿರ್ಧರಿಸಿದೆ ಎಂದು ಕೇಳಿತ್ತು. ಹಾಗೆಯೇ ಅದಕ್ಕೆ ಪೂರಕ ಕ್ರಮ ಕೈಗೊಳ್ಳುವಂತೆಯೂ ಸೂಚಿಸಿತ್ತು. ಅದಕ್ಕೆ ಪೂರಕ ಎಂಬಂತೆ ರಾಜ್ಯ ಸರ್ಕಾರ ಈ ಆದೇಶ ಹೊರಡಿಸಿದೆ.
ಇದರನ್ವಯ ಸಾಲದ ಹೊರೆ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡ ರೈತರ ಕುಟುಂಬಗಳಿಗೆ 5 ಲಕ್ಷ ಪರಿಹಾರ ನೀಡಲಾಗುತ್ತದೆ. ಆದರೆ ಇದಕ್ಕೆ ಷರತ್ತುಗಳು ಅನ್ವಯವಾಗುತ್ತದೆ ಎಂದು ತಿಳಿಸಿದೆ. ಸರ್ಕಾರದಿಂದ ಅಧಿಕೃತವಾಗಿ ಪರವಾನಗಿ ಪಡೆದುಕೊಂಡಿರುವ ಲೇವಾದೇವಿದಾರರು, ಹಣಕಾಸು ಸಂಸ್ಥೆಗಳು, ಚಿಟ್ಫಂಡ್ಗಳಿಂದ ಪಡೆದ ಸಾಲದ ಹೊರೆ ತಾಳದೆ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದರೆ ಸಂತ್ರಸ್ತ ಕುಟುಂಬಗಳಿಗೆ ಪರಿಹಾರ ನೀಡಲಾಗುತ್ತದೆ. ಪರವಾನಗಿ ಪಡೆಯದ ಸಂಸ್ಥೆಗಳಿಂದ ಸಾಲ ಪಡೆದಿದ್ದರೆ ಪರಿಹಾರ ಇಲ್ಲ ಎಂದು ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.