ಬೆಂಗಳೂರು: ರಾಜ್ಯದ ಗಣಿ ಕೇಂದ್ರ ಬಳ್ಳಾರಿಯಲ್ಲಿ ದೇಶದ ಎರಡನೇ ಗಣಿ ತರಬೇತಿ ಶಾಲೆ ಶೀಘ್ರದಲ್ಲೇ ಸ್ಥಾಪನೆಯಾಗಲಿದೆ.
ಈ ಯೋಜನೆಯನ್ನು 50 ಎಕರೆ ಪ್ರದೇಶದಲ್ಲಿ ಗಣಿ ಮತ್ತು ಭೂವಿಜ್ಞಾನ ಇಲಾಖೆ ಸ್ಥಾಪನೆ ಮಾಡುತ್ತಿದೆ. ಈ ಶಾಲೆಯಲ್ಲಿ ಕರ್ನಾಟಕ ಮತ್ತು ಭಾರತದ ಬೇರೆ ಬೇರೆ ಭಾಗಗಳಲ್ಲಿ ಕಾರ್ಯ ನಿರ್ವಹಿಸುವ ಗಣಿಗಾರಿಕಾ ಕಂಪೆನಿಗಳ ಸಿಬ್ಬಂದಿಗಳಿಗೆ ತರಬೇತಿ ನೀಡಲಾಗುತ್ತದೆ ಎಂದು ಮೂಲಗಳು ತಿಳಿಸಿವೆ. ಇಲ್ಲಿ ಗಣಿಗಾರಿಕೆ ಸಂಸ್ಥೆಗಳ ಮಾಲೀಕರು ಮತ್ತು ಇತರ ಉದ್ಯೋಗಿಗಳಿಗೆ ಕಾನೂನು ಷರತ್ತುಗಳು, ಸಾರಿಗೆ ಮತ್ತು ರಫ್ತು ಮೊದಲಾದವುಗಳಿಗೆ ಸಂಬಂಧಿಸಿದ ನೀತಿ ನಿಯಮಗಳು ಸೇರಿದಂತೆ ಇನ್ನಿತರ ವಿಚಾರಗಳಿಗೆ ಸಂಬಂಧಿಸಿದಂತೆ ಅಲ್ಪಾವಧಿಯ ತರಬೇತಿ ಕೋರ್ಸ್ ನೀಡಲಾಗುವುದು ಎಂದು ಸಂಬಂಧಪಟ್ಟ ಅಧಿಕಾರಿಗಳು ತಿಳಿಸಿದ್ದಾರೆ.
ಈಗಾಗಲೇ ಇಂತಹ ಒಂದು ಗಣಿಗಾರಿಕೆ ತರಬೇತಿ ಶಾಲೆ ಜಾರ್ಖಂಡ್ನಲ್ಲಿ ಕಾರ್ಯ ನಿರ್ವಹಿಸುತ್ತಿದೆ. ಬಳ್ಳಾರಿಯಲ್ಲಿ ಶಾಲೆ ಆರಂಭಕ್ಕೆ ಅಗತ್ಯ ಸಿದ್ಧತೆಗಳು ನಡೆದಿವೆ. ಮುಂದಿನ ತಿಂಗಳಲ್ಲಿ ಕಟ್ಟಡ ನಿರ್ಮಾಣಕ್ಕೆ ಚಾಲನೆ ನೀಡಲಾಗುವುದು ಎಂದು ಸಚಿವ ಮುರುಗೇಶ್ ನಿರಾಣಿ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.