ಬೆಂಗಳೂರು: ಕೋವಿಡ್ ಮೂರನೇ ಅಲೆಯ ಮುಂಜಾಗ್ರತಾ ಕ್ರಮವಾಗಿ ನಡೆದ ಕರ್ನಾಟಕ ಕೋವಿಡ್ 19 ಟಾಸ್ಕ್ಫೋರ್ಸ್ ಸಭೆಯಲ್ಲಿ ಹಲವು ಪ್ರಮುಖ ನಿರ್ಣಯ ತೆಗೆದುಕೊಳ್ಳಲಾಗಿದೆ ಎಂದು ಡಿಸಿಎಂ ಡಾ. ಅಶ್ವತ್ಥ್ ನಾರಾಯಣ್ ತಿಳಿಸಿದ್ದಾರೆ.
ರಾಜ್ಯದ ಪ್ರತಿಯೊಂದು ಜಿಲ್ಲಾಸ್ಪತ್ರೆ ಮತ್ತು ತಾಲೂಕು ಆಸ್ಪತ್ರೆಗಳಲ್ಲಿ 25 HDU, 25 ICU ಮತ್ತು 50 ಆಕ್ಸಿಜನೇಟೆಡ್ ಸೌಲಭ್ಯ ಇರುವ ಹಾಸಿಗೆ ವ್ಯವಸ್ಥೆ ಮಾಡಲಾಗುವುದು. ಹಾಗೆಯೇ ಅಗತ್ಯವಿರುವ 4000 ಹೆಚ್ಚು ವೈದ್ಯಕೀಯ ಸಿಬ್ಬಂದಿಗಳ ನೇಮಕ ಮಾಡಲಾಗುವುದು. ಈ ಹಿನ್ನೆಲೆಯಲ್ಲಿ 1500 ಕೋಟಿ ರೂ. ಅನುದಾನವನ್ನು ಸರ್ಕಾರ ನೀಡಲಿದೆ ಎಂದು ಅವರು ತಿಳಿಸಿದ್ದಾರೆ.
146 ತಾಲೂಕು ಆಸ್ಪತ್ರೆಗಳು, 19 ಜಿಲ್ಲಾಸ್ಪತ್ರೆಗಳನ್ನು ಮೇಲ್ದರ್ಜೆಗೆ ಏರಿಸಲಾಗುವುದು. ಆಸ್ಪತ್ರೆಗಳ ನಿರ್ವಹಣೆ ಮತ್ತು ಸೇವೆಯ ಗುಣಮಟ್ಟ ಕಾಯ್ದುಕೊಳ್ಳಲು ತಾಂತ್ರಿಕ ಸಮಿತಿಯ ನೇಮಕ ಮಾಡಲಾಗುವುದಾಗಿ ಅವರು ತಿಳಿಸಿದ್ದಾರೆ.
ಮಾನವ ಸಂಪನ್ಮೂಲ ಕೊರತೆ ನೀಗಿಸಲು ಎಸ್ಎಸ್ಎಲ್ಸಿ, ಪಿಯುಸಿ ಓದಿರುವ 5,000 ವಿದ್ಯಾರ್ಥಿಗಳಿಗೆ, ಪ್ರತೀ ತಿಂಗಳು 5000 ರೂ. ಸ್ಟೀಪೆಂಡ್ ನೀಡಿ 3 ತಿಂಗಳು ತರಬೇತಿ ನೀಡಲಾಗುತ್ತದೆ. ಜೊತೆಗೆ ಕೋವಿಡ್ ನಿರ್ವಹಣೆಗೆ ಸಂಬಂಧಪಟ್ಟ ಎಲ್ಲ ಆ್ಯಪ್ಗಳು ಇನ್ನು 2 ತಿಂಗಳಲ್ಲಿ ಒಂದೇ ಪೋರ್ಟಲ್ನಲ್ಲಿ ಲಭ್ಯವಾಗುವಂತೆ ಮಾಡಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.
ಮುಂಜಾಗ್ರತಾ ಕ್ರಮವಾಗಿ 5 ಲಕ್ಷ ರೆಮ್ಡಿಸಿವಿರ್ ಔಷಧ ಶೇಖರಣೆಗೆ ಕ್ರಮ ಕೈಗೊಳ್ಳಲಾಗುವುದು. ಬ್ಲ್ಯಾಕ್ ಫಂಗಸ್ ರೋಗಿಗಳ ಚಿಕಿತ್ಸೆಗಾಗಿ 25,000 ಅಂಪೋಟೆರಿಸಿನ್ ಬಿ ವಯಲ್ಸ್ಗಳನ್ನು ಕೇಂದ್ರ ಸರ್ಕಾರ ಒದಗಿಸಲಿದೆ. ಪ್ರತಿನಿತ್ಯ 6ಲಕ್ಷ ಜನರಿಗೆ ಲಸಿಕೆ ನೀಡುವ ಗುರಿ ಹೊಂದಿದ್ದು, ಈ ತಿಂಗಳು 80 ಲಕ್ಷ ಜನರಿಗೆ ಲಸಿಕೆ ನೀಡಲಾಗುವುದು ಎಂದು ಅವರು ಹೇಳಿದ್ದಾರೆ. ಕೊರೋನಾ ಮ್ಯುಟೇಷನ್ ಅಧ್ಯಯನಕ್ಕೆ ರಾಜ್ಯದಲ್ಲಿ 7 ಜಿನೋಮ್ ಸೀಕ್ವೆನ್ಸಿಂಗ್ ಲ್ಯಾಬ್ಗಳ ಸ್ಥಾಪನೆಗೆ ಸರ್ಕಾರ ಕ್ರಮ ಕೈಗೊಂಡಿರುವುದಾಗಿಯೂ ಅವರು ಹೇಳಿದ್ದಾರೆ.
ಹಾಗೆಯೇ ಕೇಂದ್ರ ಸರ್ಕಾರದಿಂದ 1000LPM ಸಾಮರ್ಥ್ಯದ ಆಕ್ಸಿಜನ್ ಜನರೇಟರ್ಗಳನ್ನು ಸರ್ಕಾರಿ ಮೆಡಿಕಲ್ ಕಾಲೇಜುಗಳಿಗೆ ನೀಡಲಾಗಿದೆ. ರಾಜ್ಯ ಸರ್ಕಾರದಿಂದ 1500LPM ಸಾಮರ್ಥ್ಯದ ಆಕ್ಸಿಜನ್ ಜನರೇಟರ್ಗಳ ಅಳವಡಿಕೆ ಮಾಡಲಾಗಿದೆ. ಎಲ್ಲಾ ಆಸ್ಪತ್ರೆ, ಕಾಲೇಜುಗಳು ಸೇರಿ 500 ಮೆಟ್ರಿಕ್ ಟನ್ ಆಕ್ಸಿಜನ್ ಪೂರೈಸುವ ಗುರಿಯನ್ನು ಸರ್ಕಾರ ಹೊಂದಿದೆ. ಜೊತೆಗೆ 1 ಲಕ್ಷ #ayush64 ಔಷಧಿ ಖರೀದಿಗೆ ಸರ್ಕಾರ ಚಿಂತನೆ ನಡೆಸಿದೆ ಎಂದು ಅವರು ತಿಳಿಸಿದ್ದಾರೆ.
ಕೋವಿಡ್ ಮೂರನೇ ಅಲೆಯ ಮುಂಜಾಗ್ರತಾ ಕ್ರಮವಾಗಿ ನಡೆದ #KarnatakaCOVID19TaskForce ಸಭೆಯಲ್ಲಿ ಹಲವು ಪ್ರಮುಖ ನಿರ್ಣಯ ತೆಗೆದುಕೊಳ್ಳಲಾಗಿದೆ.
ರಾಜ್ಯದ ಪ್ರತಿಯೊಂದು ಜಿಲ್ಲಾಸ್ಪತ್ರೆ ಮತ್ತು ತಾಲೂಕು ಆಸ್ಪತ್ರೆಗಳಲ್ಲಿ 25 HDU, 25 ICU ಮತ್ತು 50 ಆಕ್ಸಿಜನೇಟೆಡ್ ಸೌಲಭ್ಯ ಇರುವ ಹಾಸಿಗೆ ವ್ಯವಸ್ಥೆ ಮಾಡಲಾಗುವುದು.@CMofKarnataka
1/5 https://t.co/hvXd4XtcJD pic.twitter.com/TU9bKDHm5V
— Dr. Ashwathnarayan C. N. (@drashwathcn) June 7, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.