ಮೈಸೂರು: ಕೊರೋನಾ ಹಿನ್ನೆಲೆಯಲ್ಲಿ ಮುಂದೂಡಲಾಗಿದ್ದ ಕೆ-ಸೆಟ್ (ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ) ಯ ದಿನಾಂಕವನ್ನು ಮರು ನಿಗದಿ ಮಾಡಲಾಗಿದೆ.
ಜುಲೈ 25 ರಂದು ಕೆ-ಸೆಟ್ ಪರೀಕ್ಷೆ ನಡೆಯಲಿವೆ ಎಂದು ಮೂಲಗಳು ತಿಳಿಸಿವೆ.
ಕಳೆದ ಎಪ್ರಿಲ್ 11 ರಂದು ಕೆ-ಸೆಟ್ ಪರೀಕ್ಷೆಯನ್ನು ನಡೆಸುವುದಾಗಿ ದಿನಾಂಕ ನಿಗದಿ ಮಾಡಲಾಗಿತ್ತು. ಆದರೆ ಆ ಬಳಿಕ ಕೊರೋನಾ ಲಾಕ್ಡೌನ್ ನಿಂದಾಗಿ ಪರೀಕ್ಷೆ ಮುಂದೂಡಲ್ಪಟ್ಟಿತ್ತು. ಇದೀಗ ಮತ್ತೆ ಪರೀಕ್ಷಾ ದಿನಾಂಕವನ್ನು ಮೈಸೂರು ವಿವಿ ಪ್ರಕಟಿಸಿದೆ.
ಈ ಸಂಬಂಧ ಹೆಚ್ಚಿನ ಮಾಹಿತಿ ತಿಳಿಯಲು http://kset.uni-mysore.ac.in/ ಅನ್ನು ಸಂಪರ್ಕಿಸುವಂತೆ ವಿವಿ ಸೂಚಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.