ನವದೆಹಲಿ: ದೇಶದಲ್ಲಿ ಕೊರೋನಾ ಸೋಂಕಿತರ ಚಿಕಿತ್ಸೆಗೆ ಪೂರಕವಾಗಿ ವೈದ್ಯಕೀಯ ಆಮ್ಲಜನಕ ಲಭ್ಯತೆ ಮತ್ತು ಪೂರೈಕೆ ವಿಚಾರವಾಗಿ ಪ್ರಧಾನಿ ಮೋದಿ ಅವರು ಇಂದು ಉನ್ನತ ಮಟ್ಟದ ಅಧಿಕಾರಿಗಳ ಜೊತೆಗೆ ಚರ್ಚೆ ನಡೆಸಿದ್ದಾರೆ.
ದೇಶಾದ್ಯಂತ ನಾಲ್ಕು ಲಕ್ಷ ಬೆಡ್ಗಳಿಗೆ ಆಮ್ಲಜನಕ ಪೂರೈಸಲು ಸಾಧ್ಯವಾಗುವಂತೆ ಒಂದೂವರೆ ಸಾವಿರ ಆಮ್ಲಜನಕ ಉತ್ಪಾದನಾ ಘಟಕಗಳನ್ನು ಸ್ಥಾಪಿಸಲು ಮುಂದಾಗಿದೆ. ವೈದ್ಯಕೀಯ ಮೂಲಸೌಲಭ್ಯಗಳ ಅಭಿವೃದ್ಧಿಗೆ ಆದ್ಯತೆ ನೀಡಿದ್ದಾರೆ. ಪಿಎಂ ಕೇರ್ ನಿಧಿ ಬಳಸಿಕೊಂಡು ದೇಶಾದ್ಯಂತ ಒಂದೂವರೆ ಸಾವಿರ ಆಮ್ಲಜನಕ ಉತ್ಪಾದನಾ ಘಟಕಗಳನ್ನು ಆರಂಭಿಸಲು ನಿರ್ಧರಿಸಲಾಗಿದೆ. ಇದರಿಂದಾಗಿ ನಾಲ್ಕು ಲಕ್ಷ ಬೆಡ್ಗಳಿಗೆ ಆಮ್ಲಜನಕ ಪೂರೈಕೆಯಾಗಲಿದೆ. ಆದಷ್ಟು ಶೀಘ್ರ ಆಮ್ಲಜನಕದ ವ್ಯವಸ್ಥೆ ಮಾಡಬೇಕು ಎಂದು ಪ್ರಧಾನಿ ಸೂಚನೆ ನೀಡಿದ್ದಾರೆ. ಆಮ್ಲಜನಕ ಸ್ಥಾವರಗಳ ಕಾರ್ಯಾಚರಣೆ ಮತ್ತು ನಿರ್ವಹಣೆ ಕುರಿತು ಆಸ್ಪತ್ರೆಯ ಸಿಬ್ಬಂದಿಗಳಿಗೆ ಸಮರ್ಪಕ ತರಬೇತಿ ನೀಡುವಂತೆ ಪ್ರಧಾನಿ ಅಧಿಕಾರಿಗಳಿಗೆ ಹೇಳಿದ್ದು, ಪ್ರತಿ ಜಿಲ್ಲೆಯಲ್ಲಿ ತರಬೇತಿ ಪಡೆದ ಸಿಬ್ಬಂದಿಗಳು ಲಭ್ಯವಿದ್ದಾರೆಯೇ ಎಂದು ಖಚಿತಪಡಿಸಿಕೊಳ್ಳಲು ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
ಕಳೆದ ಎಪ್ರಿಲ್, ಮೇ ತಿಂಗಳಲ್ಲಿ ಕೊರೋನಾ ಎರಡನೇ ಅಲೆಯ ಭೀಕರತೆಗೆ ದೇಶ ತತ್ತರಿಸಿ ಹೋಗಿತ್ತು. ದೇಶದ ವಿವಿಧ ಭಾಗಗಳ ಹಲವು ಆಸ್ಪತ್ರೆಗಳಲ್ಲಿ ಮೆಡಿಕಲ್ ಆಕ್ಸಿಜನ್ ಕೊರತೆಯಿಂದ ಸೋಂಕಿತರಿಗೆ ಚಿಕಿತ್ಸೆ ಒದಗಿಸಲು ಕಷ್ಟವಾಗುತ್ತದೆ ಎಂಬ ದೂರುಗಳು ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳ ಜೊತೆ ಸಮನ್ವಯ ಸಾಧಿಸಿ ವೈದ್ಯಕೀಯ ಆಮ್ಲಜನಕ ಉತ್ಪಾದನೆ, ಪೂರೈಕೆಗೆ ಅಗತ್ಯ ಕ್ರಮ ತೆಗೆದುಕೊಳ್ಳುತ್ತಿದೆ ಎಂದು ಅವರು ತಿಳಿಸಿದ್ದಾರೆ.
ಇದೀಗ ಕೊರೋನಾ ಎರಡನೇ ಅಲೆ ನಿಯಂತ್ರಣಕ್ಕೆ ಬರುತ್ತಿದೆ. ಆದರೆ ಕೊರೋನಾ ಮೂರನೇ ಅಲೆಯ ಭೀತಿ ದೇಶದಲ್ಲಿ ಆವರಿಸಿದೆ. ಈ ಹಿನ್ನೆಲೆಯಲ್ಲಿ ಮುಂದೆ ಕೈಗೊಳ್ಳಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ ಮಾಹಿತಿ ಪಡೆಯಲು ಅವರು ಹಿರಿಯ ಅಧಿಕಾರಿಗಳ ಜೊತೆಗೆ ಸಭೆ ನಡೆಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.