ಬೆಂಗಳೂರು: ಪ್ರಸಕ್ತ ಶೈಕ್ಷಣಿಕ ವರ್ಷಕ್ಕೆ ಸಂಬಂಧಿಸಿದಂತೆ ಚಟುವಟಿಕೆಗಳು ಮತ್ತು ಪಠ್ಯಕ್ರಮಗಳನ್ನೊಳಗೊಂಡಂತೆ ಕಲಿಕೆಯ ಸಮಗ್ರತೆಗೆ ಕ್ರಿಯಾ ಯೋಜನೆ ರೂಪಿಸಲು ಶಿಕ್ಷಣ ಇಲಾಖೆಯ ಆಯುಕ್ತರ ನೇತೃತ್ವದಲ್ಲಿ ಕಾರ್ಯಪಡೆ ರಚನೆ ಮಾಡಲಾಗುತ್ತದೆ ಎಂದು ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.
ಈ ಸಮಿತಿಯಲ್ಲಿ ಶಿಕ್ಷಣ ತಜ್ಞರು ಇರಲಿದ್ದು, ಶೀಘ್ರದಲ್ಲೇ ಕಾರ್ಯಾರಂಭ ಮಾಡಲಿದೆ ಎಂದು ಅವರು ತಿಳಿಸಿದ್ದಾರೆ. ಈ ಕಾರ್ಯಪಡೆಯ ವರದಿ ಬಂದ ಬಳಿಕ ಪಠ್ಯಕ್ರಮ ಸೇರಿದಂತೆ ಇನ್ನಿತರ ಶೈಕ್ಷಣಿಕ ವಿಷಯಗಳ ಬಗ್ಗೆ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ ಎಂದು ಅವರು ಹೇಳಿದ್ದಾರೆ.
ದ್ವಿತೀಯ ಪಿಯುಸಿ ಫಲಿತಾಂಶದ ಸಿದ್ಧತೆ ನಡೆಯುತ್ತಿದೆ. ಜು. 20 ರಂದು ಫಲಿತಾಂಶ ನೀಡಲು ನಿರ್ಧರಿಸಲಾಗಿದೆ. ಈ ಬಾರಿ ಎಸ್ಎಸ್ಎಲ್ಸಿ ಪರೀಕ್ಷೆ ಬರೆಯಲಿರುವ ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗಲಿದ್ದು, ಪ್ರಥಮ ಪಿಯುಸಿ ದಾಖಲಾತಿಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು. ಗ್ರಾಮೀಣ ಭಾಗದ ಮಕ್ಕಳು ತಂತ್ರಜ್ಞಾನ ಆಧರಿತ ಪರ್ಯಾಯ ಬೋಧನೆಯಿಂದ ವಂಚಿತರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಅವರಿಗೆ ಕಲಿಕಾ ಸಲಕರಣೆಗಳ ಪೂರೈಕೆ, ಇಂಟರ್ನೆಟ್ ವ್ಯವಸ್ಥೆ ಮಾಡುವ ಬಗ್ಗೆ ಅಧಿಕಾರಿಗಳ ಜೊತೆಗೆ ಚರ್ಚಿಸಿ ಬಳಿಕ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಅವರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.