ಮಂಗಳೂರು: ತುಳು ಭಾಷೆಯನ್ನು ಎಂಟನೇ ಪರಿಚ್ಛೇದಕ್ಕೆ ಸೇರ್ಪಡೆ ಮಾಡುವಂತೆ ಮತ್ತೆ ಕೇಂದ್ರ ಸರ್ಕಾರಕ್ಕೆ ಸಮಗ್ರ ಪ್ರಸ್ತಾವನೆ ಸಲ್ಲಿಕೆ ಮಾಡಲಾಗುವುದು ಎಂದು ಸಚಿವ ಅರವಿಂದ್ ಲಿಂಬಾವಳಿ ಹೇಳಿದ್ದಾರೆ.
ಈ ಹಿಂದೆಯೂ ತುಳು ಭಾಷೆಯನ್ನು ಸಂವಿಧಾನದ ಎಂಟನೇ ಪರಿಚ್ಛೇದಕ್ಕೆ ಸೇರ್ಪಡೆ ಮಾಡುವ ಸಂಬಂಧ ಪ್ರಸ್ತಾಪಗಳನ್ನು ಸಲ್ಲಿಸಲಾಗಿತ್ತು. ಆದರೆ ಅದು ಸಮಗ್ರವಾಗಿರದ ಕಾರಣ ವಾಪಸ್ ಬಂದಿತ್ತು. ಅದಾದ ಬಳಿಕ ಆ ಸಂದರ್ಭದಲ್ಲಿ ಅಧಿಕಾರದಲ್ಲಿದ್ದ ಸರ್ಕಾರ ಯಾವುದೇ ರೀತಿಯ ಕ್ರಮ ಕೈಗೊಂಡಿರಲಿಲ್ಲ. ಇದೀಗ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧಿಕಾರಿಗಳ ಜೊತೆ ಚರ್ಚೆ ನಡೆಸಲಾಗಿದ್ದು, ಸಮಗ್ರ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಲು ಕ್ರಮ ಕೈಗೊಳ್ಳಲಾಗುವುದಾಗಿ ಅವರು ತಿಳಿಸಿದ್ದಾರೆ.
ಇದೇ ಸಂದರ್ಭದಲ್ಲಿ ಬುಡಕಟ್ಟು ಜನರ ಬಗೆಗೂ ಮಾತನಾಡಿದ ಸಚಿವರು, ಬುಡಕಟ್ಟು, ಗುಡ್ಡಗಾಡು ಪ್ರದೇಶಗಳಲ್ಲಿ ವಾಸಿಸುವ ಜನರನ್ನು ಬಲವಂತದಿಂದ ನಗರಕ್ಕೆ ಸ್ಥಳಾಂತರ ಮಾಡುವ ಉದ್ದೇಶ ಇಲ್ಲ. ಅವರು ತಾವಿರುವಲ್ಲಿಯೇ ಇರಲು ಬಯಸಿದರೆ ಅವರಿಗೆ ಅಲ್ಲಿಯೇ ಅಗತ್ಯ ಸೌಕರ್ಯಗಳನ್ನು ಒದಗಿಸಲು ಕ್ರಮ ಕೈಗೊಳ್ಳಲಿದ್ದೇವೆ. ನಗರಕ್ಕೆ ಬರಲು ಬಯಸುವವರಿಗೆ ಅಲ್ಲಿ ಪುನರ್ವಸತಿ ಕಲ್ಪಿಸಲಾಗುವುದು ಎಂದು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.