ಶಿಲ್ಲಾಂಗ್: ಈಶಾನ್ಯ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಕೇಂದ್ರ ಸಚಿವ ಅಮಿತ್ ಶಾ ಅವರು ಜುಲೈ 17 ರಂದು ಸಭೆ ನಡೆಸಲಿದ್ದು ಈ ಸಂದರ್ಭದಲ್ಲಿ ಅಂತರರಾಜ್ಯ ಗಡಿ ವಿವಾದಗಳಿಗೆ ಸಂಬಂಧಿಸಿದಂತೆ ಚರ್ಚೆ ನಡೆಯುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಈ ಸಂಬಂಧ ಮೇಘಾಲಯ ಮುಖ್ಯಮಂತ್ರಿ ಕಾನ್ರಾಡ್ ಕೆ ಸಂಗ್ಮಾ ಮಾತನಾಡಿದ್ದು, ಶಾ ಅವರ ಮುಖ್ಯಮಂತ್ರಿಗಳ ಜೊತೆಗಿನ ಸಭೆಯಲ್ಲಿ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳು, ಪೊಲೀಸ್ ಮಹಾನಿರ್ದೇಶಕರು ಭಾಗವಹಿಸಲಿರುವುದಾಗಿ ತಿಳಿಸಿದ್ದಾರೆ.
ಇಲ್ಲಿನ ತಾತ್ಕಾಲಿಕ ಕನ್ವೆನ್ಷನ್ ಹಾಲ್ನಲ್ಲಿ ಈ ಸಭೆ ನಡೆಯಲಿದ್ದು, ಈ ಸಭೆಯ ಅಧ್ಯಕ್ಷತೆಯನ್ನು ಶಾ ಅವರು ವಹಿಸಲಿದ್ದಾರೆ ಎಂದು ಸಂಗ್ಮಾ ಹೇಳಿದ್ದಾರೆ. ದೇಶದ 75 ನೇ ಸ್ವಾತಂತ್ರ್ಯ ದಿನದ ಪೂರ್ವದಲ್ಲಿ ರಾಜ್ಯಗಳ ನಡುವಿನ ಆಂತರಿಕ ಸಮಸ್ಯೆಗಳನ್ನು ಪರಿಹರಿಸುವುದು ಕೇಂದ್ರ ಸರ್ಕಾರದ ಉದ್ದೇಶವಾಗಿದೆ ಎಂದು ಅವರು ತಿಳಿಸಿದ್ದಾರೆ.
ಶಾ ಅವರ ಎರಡು ದಿನಗಳ ಮೇಘಾಲಯ ಭೇಟಿ ಇದಾಗಿರಲಿದ್ದು, ಈ ಸಂದರ್ಭದಲ್ಲಿ ಹಲವು ಯೋಜನೆಗಳನ್ನು ಅವರು ಉದ್ಘಾಟಿಸಲಿದ್ದಾರೆ ಎಂದು ಸಂಗ್ಮಾ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.