ಬೆಂಗಳೂರು: ನೆರೆಯ ರಾಜ್ಯ ಕೇರಳದಲ್ಲಿ ಝಿಕಾ ವೈರಸ್ ಹಾವಳಿ ಹೆಚ್ಚಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿಯೂ ಎಚ್ಚರ ವಹಿಸುವಂತೆ ಆರೋಗ್ಯ ಇಲಾಖೆ ಸೂಚಿಸಿದೆ.
ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ ಮೊದಲಾದ ಗಡಿ ಭಾಗಗಳಲ್ಲಿ ಹೆಚ್ಚಿನ ಮುಂಜಾಗ್ರತೆ ವಹಿಸುವಂತೆ ಆಶಾ ಕಾರ್ಯಕರ್ತೆಯರು, ಆರೋಗ್ಯ ಸಹಾಯಕರಿಗೆ ಆದೇಶ ನೀಡಲಾಗಿದೆ.
ಪ್ರಸ್ತುತ ಮಳೆಗಾಲವಾಗಿರುವುದರಿಂದ ಸೊಳ್ಳೆಗಳಿಗೆ ರೋಗ ಹಬ್ಬಿಸುವುದಕ್ಕೆ ಹೆಚ್ಚು ಅನುಕೂಲವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಎಚ್ಚರಿಕೆ ಅಗತ್ಯ. ಜ್ವರ, ಸಣ್ಣ ಸಣ್ಣ ಗುಳ್ಳೆಗಳು, ಕಣ್ಣಲ್ಲಿ ನೀರು ಸೋರುವುದು ಮೊದಲಾದವುಗಳು ಝಿಕಾ ವೈರಸ್ ಲಕ್ಷಣಗಳಾಗಿದ್ದು, ಈ ಬಗ್ಗೆ ಹೆಚ್ಚಿನ ಮುಂಜಾಗ್ರತೆ ವಹಿಸುವಂತೆ ಸೂಚಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.