ಬೆಂಗಳೂರು: ಕೊರೋನಾ ಸೋಂಕು ನಿಯಂತ್ರಣದ ಭಾಗವಾಗಿ ಲಸಿಕಾ ಅಭಿಯಾನ ಆರಂಭವಾಗಿದ್ದು, ರಾಜ್ಯದಲ್ಲಿ ಈ ವರೆಗೆ ಸುಮಾರು 2.5 ಕೋಟಿಗೂ ಅಧಿಕ ಮೊದಲ ಡೋಸ್ ಲಸಿಕೆ ನೀಡಲಾಗಿದೆ ಎಂದು ಡಾ. ಕೆ. ಸುಧಾಕರ್ ಅವರು ತಿಳಿಸಿದ್ದಾರೆ.
ಕೊರೋನಾ ಸೋಂಕು ತಡೆಗೆ ರಾಜ್ಯದಲ್ಲಿ ಸಾಗಿರುವ ಕೊರೋನಾ ಲಸಿಕೆ ನೀಡಿಕೆಯಲ್ಲಿ ನಾವು ಮಹತ್ವದ ಮೈಲಿಗಲ್ಲು ಸಾಧಿಸಿರುವುದಾಗಿ ಸಚಿವರು ಹೇಳಿದ್ದಾರೆ. ಕೇವಲ 15 ದಿನಗಳಲ್ಲಿ 50 ಲಕ್ಷ ಡೋಸ್ ಲಸಿಕೆಯನ್ನು ನೀಡಲಾಗಿದೆ. 2.5 ಕೋಟಿ ಡೋಸ್ ಲಸಿಕೆ ವಿತರಿಸಿದ ದೇಶದ 5 ನೇ ಮತ್ತು ದಕ್ಷಿಣ ಭಾರತದ ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಕರ್ನಾಟಕ ಪಾತ್ರವಾಗಿದೆ ಎಂದು ಅವರು ತಿಳಿಸಿದ್ದಾರೆ.
ರಾಜ್ಯದಲ್ಲಿ 2,06,01,462 ಮಂದಿಗೆ ಮೊದಲ ಡೋಸ್ ಮತ್ತು 45,20,506 ಮಂದಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ. 8,207 ಕೇಂದ್ರಗಳಲ್ಲಿ ಲಸಿಕೆ ನೀಡಲಾಗುತ್ತಿದೆ. ಇವುಗಳಲ್ಲಿ 7,609 ಸರ್ಕಾರಿ ಕೇಂದ್ರಗಳಾಗಿವೆ. 598 ಕೇಂದ್ರಗಳು ಖಾಸಗಿಯವು ಎಂದು ಸುಧಾಕರ್ ತಿಳಿಸಿದ್ದಾರೆ.
ಕರ್ನಾಟಕವು ಇಂದು 2.5 ಕೋಟಿ ಕೊರೋನ ಲಸಿಕೆ ದಾಟುವ ಮೂಲಕ ಮತ್ತೊಂದು ಮೈಲಿಗಲ್ಲು ಸಾಧಿಸಿದೆ! ಕೊನೆಯ 50 ಲಕ್ಷ ಲಸಿಕೆಯನ್ನು ಕೇವಲ 17 ದಿನಗಳಲ್ಲಿ ನೀಡಲಾಯಿತು! ನಮ್ಮ ರಾಜ್ಯ ಭಾರತದಲ್ಲಿ 5 ನೇ ಸ್ಥಾನ ಮತ್ತು ದಕ್ಷಿಣ ಭಾರತದಲ್ಲಿ ನಂ .1 ಸ್ಥಾನದಲ್ಲಿದೆ. @BSYBJP pic.twitter.com/6rnDv7aDMm
— Dr Sudhakar K (@mla_sudhakar) July 9, 2021
ಕಾಲೇಜು ಶಿಕ್ಷಣ ವಿಭಾಗವು 51.12% ವಿದ್ಯಾರ್ಥಿಗಳು ಮತ್ತು ಬೋಧಕ, ಬೋಧಕೇತರ ಸಿಬ್ಬಂದಿಗೆ ಲಸಿಕೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.