ಶ್ರೀನಗರ: ಜಮ್ಮು ಕಾಶ್ಮೀರದಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್ಕೌಂಟರ್ ಒಂದರಲ್ಲಿ ಇಬ್ಬರು ಉಗ್ರರ ಸಂಹಾರವಾಗಿದೆ.
ಅನಂತ್ ನಾಗ್ ಜಿಲ್ಲೆಯಲ್ಲಿ ಇಂದು ಮಧ್ಯಾಹ್ನದ ವೇಳೆ ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸಿದ್ದು, ಈ ಸಂದರ್ಭದಲ್ಲಿ ಉಗ್ರರಿಬ್ಬರ ದಮನವಾಗಿದೆ ಎಂದು ಮೂಲಗಳು ಹೇಳಿವೆ.
ಅನಂತ್ ನಾಗ್ ನ ಕವರಿಗಾಮ್ ಪ್ರದೇಶದಲ್ಲಿ ಉಗ್ರರು ಅಡಗಿರುವ ಖಚಿತ ಮಾಹಿತಿ ಪಡೆದ ಭದ್ರತಾ ಪಡೆಗಳು ಈ ಕಾರ್ಯಾಚರಣೆ ನಡೆಸಿವೆ. ಉಗ್ರರು ಅಡಗಿರುವ ಪ್ರದೇಶವನ್ನು ಸುತ್ತುವರಿದ ಸಂದರ್ಭದಲ್ಲಿ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಇದಕ್ಕೆ ಪ್ರತಿದಾಳಿ ನಡೆಸಿದ ಯೋಧರು ಇಬ್ಬರು ಉಗ್ರರನ್ನು ಯಮಪುರಿಗಟ್ಟಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.