ಲಕ್ನೋ: ಅಲ್ ಖೈದಾ ಸಂಘಟನೆಗೆ ಸೇರಿದ ಇಬ್ಬರು ಶಂಕಿತ ಉಗ್ರರನ್ನು ಲಕ್ನೋದಲ್ಲಿ ಬಂಧಿಸಲಾಗಿದ್ದು, ಈ ಸಂಬಂಧ ಉತ್ತರ ಪ್ರದೇಶದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.
ಅಲ್ ಖೈದಾ ಬೆಂಬಲ ಪಡೆಯುತ್ತಿರುವ ಅನ್ಸರ್ ಗಝ್ವಾತುಲ್ ಹಿಂದ್ ಸಂಘಟನೆಗೆ ಬಂಧಿತ ಉಗ್ರರು ಸೇರಿದವರಾಗಿದ್ದಾರೆ ಎಂದು ಮೂಲಗಳು ಹೇಳಿವೆ. ಘಟನೆಯ ಬಳಿಕ ಹರ್ದೋಯ್, ಸೀತಾಪುರ್, ಬರಾಬಂಕಿ, ರಾಯ್ ಬರೇಲಿ ಸೇರಿದಂತೆ ಇನ್ನಿತರ ಕಡೆಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.
ರಾಜ್ಯದ ಭಯೋತ್ಪಾದನಾ ನಿಗ್ರಹ ದಳ ಲಕ್ನೋದ ಎರಡು ನಿವಾಸಗಳ ಮೇಲೆ ದಾಳಿ ನಡೆಸಿ ಸ್ಥಳದಲ್ಲಿದ್ದ ಏಳು ಮಂದಿ ಉಗ್ರರ ಪೈಕಿ ಇಬ್ಬರನ್ನು ಬಂಧಿಸಿತ್ತು. ಉಳಿದ ಐದು ಮಂದಿ ತಪ್ಪಿಸಿಕೊಂಡಿದ್ದು ಅಧಿಕಾರಿಗಳು ಮತ್ತಷ್ಟು ಕಾರ್ಯಾಚರಣೆ ನಡೆಸುತ್ತಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.