ಚಿತ್ರದುರ್ಗ: ಎಲ್ಲಾ ಜಿಲ್ಲೆಗಳಲ್ಲೂ ವಸತಿ ಶಾಲೆಗಳನ್ನು ಸ್ಥಾಪಿಸುವ ರಾಜ್ಯ ಸರ್ಕಾರದ ಮಾದರಿಯನ್ನು ಕೇಂದ್ರ ಸರ್ಕಾರ ಅಳವಡಿಸಿಕೊಳ್ಳಲು ಚಿಂತನೆ ನಡೆಸಿದೆ ಎಂದು ಕೇಂದ್ರ ಸಚಿವ ಎ. ನಾರಾಯಣಸ್ವಾಮಿ ಅವರು ತಿಳಿಸಿದ್ದಾರೆ.
ವಸತಿ ಶಾಲೆಗಳ ನಿರ್ಮಾಣಕ್ಕೆ ಸಂಬಂಧಿಸಿದಂತೆ ಕರ್ನಾಟಕದ ಮಾದರಿಯನ್ನು ಅಳವಡಿಕೆ ಮಾಡಿಕೊಳ್ಳಲು ಕೇಂದ್ರ ಆಶಯ ಇರಿಸಿಕೊಂಡಿದೆ ಎಂದು ಅವರು ತಿಳಿಸಿದ್ದಾರೆ. ಹಾಗೆಯೇ, ಶಿಕ್ಷಣ, ಕೌಶಲ್ಯ ಅಭಿವೃದ್ಧಿ, ಎಸ್ಸಿ, ಒಬಿಸಿಗಳ ಜೀವನ, ಸಾಮಾಜಿಕವಾಗಿ ನಿರ್ಲಕ್ಷ್ಯಕ್ಕೊಳಗಾದ ವರ್ಗಗಳು, ತೃತೀಯ ಲಿಂಗಿಗಳು, ಹಿರಿಯ ನಾಗರಿಕರು, ವಿಶೇಷ ಚೇತನರ ಜೀವನದ ಸುಧಾರಣೆಗೆ ಕೇಂದ್ರ ಸರ್ಕಾರ ಹೆಚ್ಚು ಪ್ರಾಶಸ್ತ್ಯ ನೀಡಲಿದೆ ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ಹಿಂದುಳಿದ ವರ್ಗಗಳ ಮಕ್ಕಳ ಶಿಕ್ಷಣಕ್ಕಾಗಿ ಅನುಷ್ಠಾನ ಮಾಡಿದ ಮೊರಾರ್ಜಿ ದೇಸಾಯಿ, ಕಿತ್ತೂರು ಚೆನ್ನಮ್ಮ ವಸತಿ ಶಾಲೆಗಳನ್ನು ಸ್ಥಾಪಿಸಿದಂತೆಯೇ ದೇಶಾದ್ಯಂತ ಇಂತಹ ಮಾದರಿಯನ್ನು ಅಳವಡಿಸಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ. ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗೂ ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಆದರ್ಶ ಗ್ರಾಮ ಯೋಜನೆಯನ್ನು ಮನ್ರೇಗಾ ಯೋಜನೆಯ ಜೊತೆಗೆ ವಿಲೀನ ಮಾಡಲಾಗುತ್ತದೆ ಎಂದು ಸಚಿವರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.