ಬೆಂಗಳೂರು: ಕೊರೋನಾ ಸಂಕಷ್ಟದ ಹಿನ್ನೆಲೆಯಲ್ಲಿ ಗ್ರಾಮೀಣ ಮಕ್ಕಳ ಕಲಿಕಾ ನಿರಂತರತೆಗೆ ಅನುಕೂಲ ಕಲ್ಪಿಸಲು ನೆಟ್ವರ್ಕ್ ಸಮಸ್ಯೆಯಾಗದಂತೆ ಎಚ್ಚರಿಕೆ ವಹಿಸುವ ನಿಟ್ಟಿನಲ್ಲಿ, ಅಗತ್ಯ ಕ್ರಮಗಳನ್ನು ಕೈಗೊಳ್ಳುವ ಸಂಬಂಧ ರಾಜ್ಯದ ಮುಖ್ಯಕಾರ್ಯದರ್ಶಿಯವರ ಜೊತೆ ಸಚಿವ ಸುರೇಶ್ ಕುಮಾರ್ ಮಾತುಕತೆ ನಡೆಸಿದ್ದಾರೆ.
ಪ್ರಸ್ತುತ ಮಳೆಗಾಲದಲ್ಲಿ ಶಿಕ್ಷಣಕ್ಕೆ ಸಂಬಂಧಿಸಿದಂತೆ ಭೌತಿಕ ತರಗತಿಗಳು ನಡೆಯುತ್ತಿಲ್ಲ. ಈ ಹಿನ್ನೆಲೆಯಲ್ಲಿ ಆನ್ಲೈನ್ ತರಗತಿಗಳು ನಡೆಯುತ್ತಿವೆ. ಗ್ರಾಮೀಣ ಪ್ರದೇಶಗಳಲ್ಲಿ ನೆಟ್ವರ್ಕ್ ಸಮಸ್ಯೆಗಳು ಕಂಡು ಬರುತ್ತಿರುವ ಬಗ್ಗೆ ದೂರುಗಳು ಕೇಳಿ ಬರುತ್ತಿವೆ. ಮಕ್ಕಳ ಬೋಧನಾ ವಿಧಾನದ ಗುಣಮಟ್ಟ ಸುಧಾರಿಸುವ ನಿಟ್ಟಿನಲ್ಲಿ, ನೆಟ್ವರ್ಕ್ ಸಮಸ್ಯೆ ಪರಿಹರಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಗಮನ ಹರಿಸಲು ಸಚಿವರು ಸೂಚಿಸಿದ್ದಾರೆ.
ಈ ಸಂಬಂಧ ಮುಖ್ಯಮಂತ್ರಿ ಯಡಿಯೂರಪ್ಪ ಅವರೂ ಸಹ ಮುಖ್ಯ ಕಾರ್ಯದರ್ಶಿಯವರಿಗೆ ಸೂಚನೆ ನೀಡಿದ್ದು, ಸಮರೋಪಾದಿಯಲ್ಲಿ ಕೆಲಸ ಮಾಡುವಂತೆ ಹೇಳಿದ್ದಾರೆ.
ಹಾಗೆಯೇ ಗ್ರಾಮ ಪಂಚಾಯತ್ ಗ್ರಂಥಾಲಯಗಳಲ್ಲಿ ಆನ್ಲೈನ್ ಶಿಕ್ಷಣ ಸೌಲಭ್ಯ ವಂಚಿತ ಮಕ್ಕಳಿಗೆ ಶಿಕ್ಷಣ ಒದಗಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಸುರೇಶ್ ಕುಮಾರ್ ಸೂಚಿಸಿರುವುದಾಗಿ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.