ಧಾರವಾಡ: ನೂತನ ರಾಷ್ಟ್ರೀಯ ಶಿಕ್ಷಣ ನೀತಿಯ ಮೂಲಕ 50% ಗಳಷ್ಟು ಹೆಚ್ಚಿನ ವಿದ್ಯಾರ್ಥಿಗಳನ್ನು ಉನ್ನತ ಶಿಕ್ಷಣದತ್ತ ಆಕರ್ಷಿಸುವ ಗುರಿಯನ್ನು ಸರ್ಕಾರ ಹೊಂದಿದೆ ಎಂದು ಡಿಸಿಎಂ ಡಾ. ಅಶ್ವತ್ಥ್ ನಾರಾಯಣ್ ಹೇಳಿದರು.
ಪದವಿ ಶಿಕ್ಷಣದಿಂದ ಉನ್ನತ ಶಿಕ್ಷಣದತ್ತ ವಿದ್ಯಾರ್ಥಿಗಳನ್ನು ಹೆಚ್ಚಿಸಲು ಕ್ರಮ ಕೈಗೊಳ್ಳಲಾಗುವುದು. ಜೊತೆಗೆ ಹೊಸ ಶಿಕ್ಷಣ ನೀತಿಯಿಂದಾಗಿ ಉದ್ಯಮಕ್ಕೆ ಅಗತ್ಯವಿರುವ ಕೌಶಲ್ಯಗಳನ್ನು ಸಹ ವಿದ್ಯಾರ್ಥಿಗಳಿಗೆ ಒದಗಿಸಲಾಗುವುದು. ಈ ಹಿನ್ನೆಲೆಯಲ್ಲಿ ಈ ವರ್ಷದಿಂದಲೇ ನೂತನ ಶಿಕ್ಷಣ ನೀತಿ ಜಾರಿಯಾಗಲಿದೆ ಎಂದು ಅವರು ಹೇಳಿದ್ದಾರೆ.
ನೂತನ ಶಿಕ್ಷಣ ನೀತಿಯಲ್ಲಿ ಮಾತೃಭಾಷೆಗೆ ಹೆಚ್ಚು ಆದ್ಯತೆ ನೀಡಲಾಗುತ್ತದೆ. ಪ್ರಾಥಮಿಕ, ಪ್ರೌಢಶಾಲೆಗಳ ಜೊತೆಗೆ ವೃತ್ತಿ ಶಿಕ್ಷಣಗಳನ್ನು ಸಹ ಮಾತೃಭಾಷೆಯಲ್ಲೇ ಕಲಿಯಲು ಅನುಕೂಲ ಮಾಡಿಕೊಡಲಾಗುವುದು ಎಂದು ಅವರು ತಿಳಿಸಿದ್ದಾರೆ.
ಕರ್ನಾಟಕ ವಿಶ್ವವಿದ್ಯಾಲಯ, ಧಾರವಾಡದ ಸಂಬಂಧಪಟ್ಟ ಅಧಿಕಾರಿಗಳ ಜತೆ #NEP2020 ಅನುಷ್ಠಾನದ ಕುರಿತು ಚರ್ಚಿಸಿದೆ.
ಹೊಸ ಶಿಕ್ಷಣ ನೀತಿಯನ್ನು ರಾಜ್ಯದಲ್ಲಿ ತ್ವರಿತ ಜಾರಿಗೆ ತರುವ ಉದ್ದೇಶದಿಂದ ವಿಷಯವಾರು ತಜ್ಞರ ಸಮಿತಿ ರಚಿಸಿ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ.
ಮೌಲ್ಯಾಧಾರಿತ ಶಿಕ್ಷಣ ನೀಡುವ ನಿಟ್ಟಿನಲ್ಲಿ ಸರ್ಕಾರ ಪ್ರಯತ್ನಿಸುತ್ತಿದೆ.
1/2 pic.twitter.com/0GRDZG1Fs8
— Dr. Ashwathnarayan C. N. (@drashwathcn) July 12, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.