ನವದೆಹಲಿ: ಸಾಮಾಜಿಕ ಮಾಧ್ಯಮಗಳ ಮೂಲಕ ಪ್ರಚೋದನಾತ್ಮಕ ಸಂದೇಶಗಳು, ದ್ವೇಷಪೂರಿತ ಹೇಳಿಕೆ ಮೊದಲಾದವುಗಳಿಗೆ ಸಂಬಂಧಿಸಿದಂತೆ ನೂತನ ಮಾಹಿತಿ ತಂತ್ರಜ್ಞಾನ ಕಾಯ್ದೆಯ ನಿಯಮಗಳು ನಿಗಾ ವಹಿಸುತ್ತವೆ ಎಂದು ಸುಪ್ರೀಂಕೋರ್ಟ್ ತಿಳಿಸಿದೆ.
ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗುವ ಸಂದೇಶಗಳನ್ನು ಹಾಕುವ ಟ್ವಿಟ್ಟರ್ ಬಳಕೆದಾರರ ಮತ್ತು ಸಂಸ್ಥೆಯ ವಿರುದ್ಧ ಸಿಬಿಐ, ಎನ್ಐಎ ತನಿಖೆ ನಡೆಸುವಂತೆ ವಕೀಲರೊಬ್ಬರು ಸಲ್ಲಿಕೆ ಮಾಡಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಪೀಠ, ಮಾಹಿತಿ ತಂತ್ರಜ್ಞಾನದ ಇತ್ತೀಚಿನ ಹೊಸ ನಿಯಮಗಳನ್ನು ಗಮನಿಸುವಂತೆ ಸೂಚಿಸಿದೆ.
ಹೊಸ ಐಟಿ ಕಾಯ್ದೆಯಲ್ಲಿ ಕೇಂದ್ರ ಸರ್ಕಾರ ದ್ವೇಷಪೂರಿತ, ಪ್ರಚೋದನಾತ್ಮಕ ಸಂದೇಶಗಳಿಗೆ ಸಂಬಂಧಿಸಿದಂತೆಯೂ ನಿಯಮಗಳನ್ನು ರೂಪಿಸಿದ್ದು, ಈ ನಿಯಮಗಳು ಎಲ್ಲಾ ಸಂಸ್ಥೆಗಳಿಗೂ ಅನ್ವಯಿಸಲಿದೆ ಎಂಬುದಾಗಿ ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.