ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪ, ರಾಜ್ಯ ಮತ್ತು ಕೇಂದ್ರದ ಹಿರಿಯ ಅಧಿಕಾರಿಗಳ ಜೊತೆಗೆ ಇಂದು ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರು ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಜಲಜೀವನ ಮಿಷನ್ ಯೋಜನೆಯ ಕುರಿತು ಸಭೆ ನಡೆಸಿದರು.
ರಾಜ್ಯದಲ್ಲಿ ಜಲಜೀವನ ಮಿಷನ್ ಕಾರ್ಯಕ್ರಮವನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವಂತೆಯೂ ಅವರು ಸಲಹೆ ನೀಡಿದರು. 2024 ರ ವೇಳೆ ಈ ಯೋಜನೆಯ ಮೂಲಕ ದೇಶದ 18.93 ಕೋಟಿ ಗ್ರಾಮೀಣ ಮನೆಗಳಲ್ಲಿ 15.70 ಕೋಟಿ ಮನೆಗಳಿಗೆ ಕ್ರಿಯಾತ್ಮಕ ನಲ್ಲಿ ನೀರಿನ ಸಂಪರ್ಕ ನೀಡುವ ಗುರಿ ಹೊಂದಲಾಗಿದೆ ಎಂದು ತಿಳಿಸಿದರು.
ಈ ಯೋಜನೆಯನ್ವಯ ಕೇವಲ ಸೌಲಭ್ಯ ಕಲ್ಪಿಸುವುದು ಮಾತ್ರವಲ್ಲ, ಅದರ ಜೊತೆಗೆ ನಿರಂತರವಾಗಿ ಕುಡಿಯುವ ನೀರು ಒದಗಿಸುವುದು ಸರ್ಕಾರದ ಮೊದಲ ಆದ್ಯತೆ. ರಾಜ್ಯದಲ್ಲಿ ಆದ್ಯತಾ ಜಿಲ್ಲೆಗಳಾದ ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಕ್ರಿಯಾತ್ಮಕ ನಳ ಸಂಪರ್ಕಗಳನ್ನು ಆದ್ಯತೆಯ ಮೇರೆಗೆ ಒದಗಿಸುವಂತೆ ಸಚಿವರು ಹೇಳಿದ್ದಾರೆ. ಹಾಗೆಯೇ ನಳ್ಳಿ ಸಂಪರ್ಕದ ಜೊತೆಗೆ ನೀರಿನ ಗುಣಮಟ್ಟಕ್ಕೆ ಆದ್ಯತೆ ನೀಡುವಂತೆಯೂ ಅವರು ತಿಳಿಸಿದರು.
Had a productive meeting with Union Minister for Jal Shakti Shri @gssjodhpur ji and discussed about implementation of various projects in the state. Reiterated our Govt's commitment to ensure functional tap water connection to all households at the earliest.@PMOIndia pic.twitter.com/FtR4P75ZCH
— B.S. Yediyurappa (@BSYBJP) July 13, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.