ಬೆಂಗಳೂರು: ರಾಜ್ಯದಲ್ಲಿ 250 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು, ಆರೋಗ್ಯ ಸಂಕೀರ್ಣಗಳಾಗಿ ಮೇಲ್ದರ್ಜೆಗೆ ಏರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಇದರನ್ವಯ ಉಡುಪಿ ಮತ್ತು ದಕ್ಷಿಣ ಕನ್ನಡಗಳಿಗೆ ಸಂಬಂಧಿಸಿದಂತೆ 12 ಆರೋಗ್ಯ ಕೇಂದ್ರಗಳನ್ನು ಆಯ್ಕೆ ಮಾಡಿ ಪ್ರಸ್ತಾವನೆ ಸಲ್ಲಿಸಲಾಗಿದೆ. ಉಡುಪಿ ಜಿಲ್ಲೆಯಲ್ಲಿ ಒಟ್ಟು 61 ಪ್ರಾಥಮಿಕ ಆರೋಗ್ಯ ಕೇಂದ್ರಗಳಿದ್ದು, ಅದರಲ್ಲಿ 5 ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲು ಆಯ್ಕೆ ಮಾಡಲಾಗಿದೆ.
ಮೇಲ್ದರ್ಜೆಗೇರಿಸಲು ಆಯ್ಕೆಯಾಗುವ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಕನಿಷ್ಠ 2 ಎಕರೆಗಳಷ್ಟು ಜಾಗವಿರಬೇಕು. ಮೇಲ್ದರ್ಜೆಗೆ ಏರಿಸಿದ ಬಳಿಕ ಆ ಕೇಂದ್ರಗಳಲ್ಲಿ ಇಬ್ಬರು ಎಂಬಿಬಿಎಸ್ ವೈದ್ಯರು, ಒಬ್ಬರ ಬಿಎಎಂಎಸ್ ವೈದ್ಯರು ಸೇವೆ ನೀಡಲಿದ್ದಾರೆ. ಹಾಗೆಯೇ ದಿನದ 24 ಗಂಟೆಗಳ ಕಾಲ ಇಲ್ಲಿ ಸೇವೆ ದೊರೆಯಲಿದೆ.
ರಾಜ್ಯದ ಆರೋಗ್ಯ ಕೇಂದ್ರಗಳನ್ನು ಮಾದರಿ ಆರೋಗ್ಯ ಕೇಂದ್ರಗಳನ್ನಾಗಿ ರೂಪಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಈ ಮಹತ್ವದ ಕ್ರಮಕ್ಕೆ ಮುಂದಾಗಿದೆ. ಒಟ್ಟು 3 ಕೋಟಿ ರೂ. ವೆಚ್ಚದಲ್ಲಿ ಆಸ್ಪತ್ರೆ, 2 ಕೋಟಿ ರೂ. ವೆಚ್ಚದಲ್ಲಿ ವಸತಿ ಗೃಹ ನಿರ್ಮಾಣ ಮಾಡುವುದಾಗಿಯೂ ಸರ್ಕಾರ ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.